ಬೆಂಗಳೂರು; ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಯಾಗುವ ಸಾಧ್ಯತೆ ಇದೆ. ಉಪಚುನಾವಣೆಯ ವೇಳೆ ಇದನ್ನ ಜಾರಿಗೆ ತರುವುದಕ್ಕೆ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಯೋಜನೆಯನ್ನ ಮುಂದೂಡಿಕೆ ಮಾಡಿತ್ತು. ಈಗ ಮಸೂದೆ ರೂಪದಲ್ಲಿ ಮುಸ್ಲಿಂರಿಗೆ ಮೀಸಲಾತಿ ತರೋದಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಆ ವಿಧೇಯಕದಲ್ಲಿ ಮಂಡಿಸಲಾಗುತ್ತಿದೆ. ಈ ವಿಧೇಯಕದ ಬಗ್ಗೆ ಇಂದು ಸಂಜೆ 7 ಗಂಟೆಗೆ ನಡೆಯುವ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡುವಂತ ವಿಧೇಯಕ ಇದಾಗಿದೆ. ಮಸೂದೆ ರೂಪದಲ್ಲಿ ತರೋದಕ್ಕೆ ಯೋಜನೆ ರೂಪಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಸಂಜೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ಈ ಬಾರಿಯ ಅಧಿವೇಶನದಲ್ಲಿಯೇ ಈ ವಿಧೇಯಕವನ್ನ ಮಂಡನೆ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತ ಶಾಸಕ, ಸಚಿವರೆಲ್ಲರು ಈಗಾಗಲೇ ಎಸ್ಸಿ/ಎಸ್ಟಿ ಸಮುದಾಯ ಹಾಗೂ ಪ್ರವರ್ಗ 1,2,Aಗೆ ಮೀಸಲಾತಿಯನ್ನು ಸರ್ಕಾರಿ ಕಾಮಗಾರಿಗಳಲ್ಲಿ ನೀಡಲಾಗ್ತಾ ಇದೆ. ಒಂದು ಕೋಟಿಯಷ್ಟು ಸರ್ಕಾರಿ ಕಾಮಗಾರಿಗಳಲ್ಲಿ ಶೇಕಡ 15% ರಷ್ಟು ಮೀಸಲಾತಿಯನ್ನ ಎಸ್ಸಿ/ಎಸ್ಟಿ ಹಾಗೂ ಉಳಿದ ಸಮುದಾಯಗಳಿಗೂ ನೀಡಲಾಗ್ತಾ ಇದೆ. ಇದೇ ಮಾದರಿಯಲ್ಲಿ ಮುಸ್ಲಿಂರಿಗೂ ಪ್ರತ್ಯೇಕವಾದ ಮೀಸಲಾತಿಯನ್ನ ಸರ್ಕಾರಿ ಕಾಮಗಾರಿಯಲ್ಲಿ ನೀಡಬೇಕು ಎಂಬ ಮನವಿಯನ್ನ ಸಲ್ಲಿಸಲಾಗಿತ್ತು. ಆದರೆ ಅಂದು ಉಪಚುನಾವಣೆ ಇದ್ದ ಕಾರಣ ಟೀಕೆಗಳು ವ್ಯಕ್ತವಾದ ಹಿನ್ನೆಲೆ ಸರ್ಕಾರ ಮುಂದೂಡಿತ್ತು. ಈಗ ಮತ್ತೆ ಆ ವಿಚಾರವನ್ನು ಮುನ್ನಲೆಗೆ ತಂದಿದೆ. ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರವನ್ನ ಚರ್ಚೆಗೆ ತರಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











