ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ : ಏನಿದು ಹೊಸ ವಿವಾದ..?

1 Min Read

ಬೆಂಗಳೂರು: ಗುತ್ತಿಗೆ ವಿಚಾರದಲ್ಲಿ ಮುಸ್ಲಿಮರ ಒಲೈಕೆ ಮಾಡಿದ್ದಂತ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೆ ಮುಸ್ಲಿಮರ ಒಲೈಕೆ ಮಾಡಲು ರೆಡಿಯಾಗಿದ್ದಾರೆ. ವಸತಿ ಯೋಜನೆಯಲ್ಲೂ ಮೀಸಲಾತಿಯನ್ನ ಹೆಚ್ಚಳ ಮಾಡುವುದಕ್ಕೆ ಹೊರಟಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿದ್ದರಾಮಯ್ಯ ಸರ್ಕಾರ ಕೈಗೊಂಡ ಈ ನಿರ್ಣಯಕ್ಕೆ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಇವತ್ತು ಸಚಿವ ಸಂಪುಟ ಸಭೆ ನಡೆಸಿತ್ತು. ಈ ಸಭೆಯಲ್ಲಿ ಶೇಕಡ 10ರಷ್ಡಿರುವ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ.

ಮುಸ್ಲಿಂ, ಜೈನ, ಕ್ರೈಸ್ತ ಸೇರಿ ಎಲ್ಲಾ ಅಲ್ಪಸಂಖ್ಯಾತರಿಗೂ ಇದು ಅನ್ವಯ ಆಗಲಿದೆ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡುವುದು ಸರ್ಕಾರದ ಉದ್ದೇಶವಾಗಿದೆ.‌ ಸಾಚಾರ್ ಕಮಿಟಿ ವರದಿಯಮ್ನೂ ಕೇಂದ್ರ ಪರಿಗಣಿಸುತ್ತದೆ. ಕೇಂದ್ರ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದು, ಬಳಿಕ ಮಾತನಾಡಿದ ಸಚಿವ ಕೆ ಹೆಚ್ ಪಾಟೀಲ್ ಅವರು, ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯ ಆಗಲಿದೆ. ಸಾಚಾರ್ ಕಮಿಟಿ ವರದಿಯಮ್ನೂ ಕೇಂದ್ರ ಪರಿಗಣಿಸುತ್ತದೆ. ಕೇಂದ್ರ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ಮುಸ್ಲಿಂ, ಜೈನರು, ಕ್ರಿಶ್ಚಿಯಯ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳು ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವೂ ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks