ಬೆಂಗಳೂರು; ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡಿದ ಬಗ್ಗೆ ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ.
ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ #NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ.
ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ @INCIndia ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ. ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ. ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್ ಅಚಲ ನಿಲುವು ಎಂದು ಟ್ವೀಟ್ ಮಾಡಿದೆ.
ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…
ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…
ಚಿತ್ರದುರ್ಗ. ಮಾರ್ಚ್26 : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಬೆಂಗಳೂರು, ಮಾರ್ಚ್. 26 : ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…
ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ…