Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೀಸಲಾತಿ ಭಿಕ್ಷೆಯಲ್ಲ, ಸಂವಿಧಾನ ನೀಡಿರುವ ಹಕ್ಕು : ಬಿ.ಕೆ.ಹರಿಪ್ರಸಾದ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 : ಮೀಸಲಾತಿ ಭಿಕ್ಷೆಯಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಎಲ್ಲಾ ಜಾತಿ ಧರ್ಮದವರಿಗೂ ಸಂವಿಧಾನದಡಿ ನೀಡಿರುವ ಹಕ್ಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸೀಬಾರ ಸಮೀಪವಿರುವ ಬಂಜಾರ ಗುರಪೀಠದಲ್ಲಿ ಶುಕ್ರವಾರ ನಡೆದ ಬಂಜಾರ ಬುಡಕಟ್ಟು(ಲಂಬಾಣಿ) ಸಂಸ್ಕøತಿ ಉತ್ಸವ ಉದ್ಘಾಟಿಸಿ ಮಾತನಾಡಿದರು.

ಸಾವಿರಾರು ವರ್ಷಗಳಿಂದ ಶೋಷಣೆಗೊಳಗಾಗಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ನ್ಯಾಯದಡಿ ಸಮಾನ ಅವಕಾಶ ಸಿಗಬೇಕೆಂಬ ಆಶಯವನ್ನಿಟ್ಟುಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಪ್ರತಿಯೊಬ್ಬರು ಶಿಕ್ಷಣ, ಆರೋಗ್ಯ, ನೌಕರಿ ಪಡೆಯಬೇಕಾಗಿರುವುದರಿಂದ ಜನಗಣತಿ ಆಗಬೇಕು. ಆಗ ಮಾತ್ರ ಜಾತಿವಾರು ಜನಸಂಖ್ಯೆಗನುಗುಣವಾಗಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಸಾಧ್ಯ ಎಂದರು.

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಎಲ್ಲಾ ಜಾತಿ ಧರ್ಮದವರು ಶಾಂತಿ, ಸೌಹಾರ್ಧತೆಯಿಂದ ಬಾಳುತ್ತಿರುವ ರಾಷ್ಟ್ರ ಯಾವುದಾದರೂ ಇದ್ದರೆ ಅದು ಭಾರತ. ಗುರುಪೀಠಗಳಿಂದ ಮಾತ್ರ ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರವನ್ನು ಕಲಿಸಬಹುದು. ಅವಕಾಶ ಸಿಕ್ಕಿಲ್ಲ ಹಿಂದುಳಿದಿದ್ದೇವೆನ್ನುವ ಮನೋಭಾವನೆ ಬೇಡ. ಮುಂದುವರೆದವರಿಗಿಂತ ನಾವೇನು ಕಮ್ಮಿಯಿಲ್ಲ ಎನ್ನುವ ಛಲ ನಿಮ್ಮಲ್ಲಿ ಬೆಳೆಯಬೇಕು ಎಂದು ಲಂಬಾಣಿ ಜನಾಂಗಕ್ಕೆ ಕರೆ ನೀಡಿದರು.

ಸಮಾಜದಲ್ಲಿ ಒಳ್ಳೆಯದು, ಕೆಟ್ಟದ್ದು, ಎರಡು ಇದೆ. ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮನುಷ್ಯತ್ವ ಮೈಗೂಡಿಸಿಕೊಳ್ಳಿ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೆ ರಾಜ ಮಹಾರಾಜರಿದ್ದಂತೆ. ನೀವುಗಳು ಕಟ್ಟುವ ತೆರಿಗೆ ಹಣದಿಂದಲೇ ಸರ್ಕಾರ ನಡೆಯುವುದು. ಜನಗಣತಿ ಆಗಬೇಕು. ಆದರೆ ಮೀಸಲಾತಿಗಾಗಿ ಅಲ್ಲ. ಸರ್ಕಾರದ ಗಮನ ಸೆಳೆಯುವುದಕ್ಕಾಗಿ. ಬಂಜಾರ ಜನಾಂಗದವರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಸಾಂಸ್ಕೃತಿಕ ರಾಯಭಾರಿಗಳಾಗಿರುವ ಬಂಜಾರ ಸಮುದಾಯ ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿದೆ. ಆಧುನಿಕತೆ ಎಷ್ಟೇ ಮುಂದುವರೆದಿದ್ದರು ಲಂಬಾಣಿ ಜನಾಂಗ ತಮ್ಮ ಪೂರ್ವಜರು ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯವನ್ನು ಇನ್ನು ಮುಂದುವರೆಸಿಕೊಂಡು ಬರುತ್ತಿರುವುದು ಸುಲಭದ ಕೆಲಸವಲ್ಲ. ದೇಶಕ್ಕೆ ಅಕ್ಕಿ, ಗೋಧಿ ಬೆಳೆದು ಕೊಟ್ಟವರಲ್ಲಿ ಬಂಜಾರ ಜನಾಂಗದ ಕೊಡುಗೆ ಬಹಳಷ್ಟಿದೆ. ನಿಮ್ಮ ಸಮಾಜದಲ್ಲಿ ಶಿಕ್ಷಣವಂತರು ಜಾಸ್ತಿಯಾಗಿ ಉನ್ನತ ಹುದ್ದೆಗಳಿಗೆ ಹೋಗಿದ್ದಾರೆ.

ವಿಪರ್ಯಾಸವೆಂದರೆ ಶಿಕ್ಷಣವಂತರಾದ ಕೆಲವರು ಜನಾಂಗದ ಕಡೆ ತಿರುಗಿ ನೋಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಿಮ್ಮ ಸಮುದಾಯದ ಜೊತೆ ನಾನು ಸದಾ ಇರುತ್ತೇನೆ. ನಿಮ್ಮ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತುವುದಾಗಿ ಕೆ.ಎಸ್.ನವೀನ್ ಭರವಸೆ ನೀಡಿದರು.

ಮುರುಘಾಮಠದ ಉಸ್ತುವಾರಿ ಬಸವಪ್ರಭುಸ್ವಾಮಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತ ಶೋಷಿತರ ಪರವಾಗಿರುವ ಮುರುಘಾಮಠ ಸಮ ಸಮಾಜ ಕಟ್ಟುವ ಆಶಯವಿಟ್ಟುಕೊಂಡಿದೆ. ಎಲ್ಲಾ ಜಾತಿಯವರಿಗೂ ಒಬ್ಬೊಬ್ಬ ಸ್ವಾಮಿಯನ್ನು ಮಾಡಿ ಐದು ಎಕರೆ ಜಾಗ ನೀಡಿ ಹನ್ನೆರಡನೆ ಶತಮಾನದ ಬಸವಣ್ಣನವರ ದಾರಿಯಲ್ಲಿ ನಡೆಯುತ್ತಿರುವ ಶಿವಮೂರ್ತಿ ಶರಣರು ಸಾಮಾಜಿಕ ನ್ಯಾಯ ಸಿಕ್ಕಿಲ್ಲದವರಿಗೆ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದ್ದಾರೆಂದು ಸ್ಮರಿಸಿದರು.

ಲಂಬಾಣಿ ಸಮಾಜಕ್ಕೆ ವಿಶಿಷ್ಟವಾದ ಸಂಸ್ಕೃತಿ ಭಾಷೆಯಿದೆ. ತನ್ನನ್ನು ತಾನು ತಿಳಿದುಕೊಂಡು ತನ್ನೊಳಗಿನ ತಪ್ಪುಗಳನ್ನು ಹುಡುಕಿ ಸರಿದಾರಿಯಲ್ಲಿ ನಡೆಯುವವರೆ ನಿಜವಾದ ಮಾನವರು. ಭಾರತದಲ್ಲಿ ಹಲವಾರು ಜಾತಿಗಳಿವೆ. ಆದರೆ ಲಂಬಾಣಿ ಸಮಾಜ ನೃತ್ಯದ ಮೂಲಕ ದೇಶದ ಗಮನ ಸೆಳೆದಿದೆ. ಬಹುಮುಖಿ ಸಂಸ್ಕೃತಿ ಯುಳ್ಳ ದೇಶ ನಮ್ಮದು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆಯನ್ನು ಕೊಟ್ಟಿದ್ದಾರೆ. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಿ. ಮಕ್ಕಳಿಗೆ ಆಸ್ತಿ ಗಳಿಸಿಡುವ ಬದಲು ವಿದ್ಯೆಯನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಲಂಬಾಣಿ ಜನಾಂಗಕ್ಕೆ ಕಿವಿಮಾತು ಹೇಳಿದರು. ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್‍ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬೀರಾವರ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಂಬಾರ ಗುಂಡಯ್ಯಸ್ವಾಮೀಜಿ, ಬಾಂಬೆ ಕುಮಾರನಾಯ್ಕ, ಕೆ.ಜಿ.ಪುರುಷೋತ್ತಮನಾಯ್ಕ, ಕೃಷ್ಣನಾಯ್ಕ, ಚಂದ್ರಶೇಖರನಾಯ್ಕ, ಸುದೀರ್ ಲಮಾಣಿ, ಶೇಖರಪ್ಪ ರಾಠೋಡ್, ಮಹೇಶ್‍ನಾಯ್ಕ, ಕೆ.ಓ.ನಾಯ್ಕ, ನಾಗನಾಯ್ಕ, ಕವಿತಾಬಾಯಿ, ಮಾಲಬಾಯಿ, ಶಿಲ್ಪಬಾಯಿ, ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಸತೀಶ್‍ನಾಯ್ಕ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಹೀರಾನಾಯ್ಕ ಅಧ್ಯಕ್ಷತೆ ವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!