ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಸುದ್ದಿಒನ್, ಚಿತ್ರದುರ್ಗ. ಅ.11: ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಪೋಲಿಸ್ ಆಗಿ ಕಾರ್ಯನಿರ್ವಹಿಸಬೇಕು ಎಂದು ಎಡಿಜಿಪಿ ಎಸ್.ಮುರುಗನ್ ಪೋಲಿಸರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿಗೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಪೋಲಿಸ್ ಠಾಣೆ ಹಾಗೂ ಕಚೇರಿಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಆಡಳಿತಾತ್ಮಕವಾಗಿ ಜಿಲ್ಲಾ ಪೊಲೀಸ್ ಕಚೇರಿಯ ಲಿಪಿಕ ಸಿಬ್ಬಂದಿಯು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದು ಕೊರತೆ, ಪೊಲೀಸ್ ಅಧಿಕಾರಿಗಳ ಕುಟುಂಬದವರ ಕುಂದು ಕೊರತೆಗಳ ವಿಚಾರಣೆ ನಡೆಸಿದರು.
ಎಡಿಜಿಪಿ ಎಸ್.ಮುರುಗನ್ ಅವರು ಹಿರಿಯೂರು ಡಿ ಎಸ್ ಪಿ ಕಚೇರಿ, ಐಮಂಗಲ, ಅಬ್ಬಿನಹೊಳೆ ಪೊಲೀಸ್ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.