ನಿವೃತ್ತ ಬ್ಯಾಂಕ್ ನೌಕರ ಡಾ.ಕೆ. ಸುದರ್ಶನ ನಿಧನ

1 Min Read

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.03 : ನಗರದ ಸರಸ್ವತಿ ಪುರಂ ಬಡಾವಣೆಯ ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಆಯುರ್ವೇದ ತಜ್ಞರಾದ ಡಾ. ಕೆ. ಸುದರ್ಶನ (67) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮಧ್ಯಾನ್ಹ 3 ಗಂಟೆ ನಂತರ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ
ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಸ್.ಬಿ.ಐ. ನಲ್ಲಿ ಹೆಡ್ ಕ್ಯಾಷಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ನಿವೃತ್ತಿ ಹೊಂದಿದ ನಂತರ ಬ್ರಾಹ್ಮಣ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಂತಾಪ : ಡಾ. ಕೆ. ಸುದರ್ಶನ ಅವರ ನಿಧನಕ್ಕೆ ಬ್ರಾಹ್ಮಣ ಸಂಘದ ಸದಸ್ಯರು ಅತೀವ ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *