ಚಿತ್ರದುರ್ಗ, (ನ.21) : ನಿವೃತ್ತ ಡಿವೈಎಸ್ಪಿ ಮಹಾಂತರೆಡ್ಡಿಯವರ ತಾಯಿ ರತ್ನಮ್ಮ (96) ಬೆಳಿಗ್ಗೆ 11 ಗಂಟೆ ಸುಮಾರಿಗೆ ನಿಧನರಾದರು.
ರತ್ನಮ್ಮ ಅವರಿಗೆ ನಿವೃತ್ತ ಡಿವೈಎಸ್ಪಿ ಮಹಾಂತರೆಡ್ಡಿ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಚಳ್ಳಕೆರೆ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವಾಸವಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ನಾಳೆ (ನ.22 ರ ಮಂಗಳವಾರ) ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿಗಾಗಿ : 9448076866 ಸಂಪರ್ಕಿಸಲು ತಿಳಿಸಿದ್ದಾರೆ.