Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪಿಂಚಣಿ ಸೌಲಭ್ಯಗಳ ಕಡಿತ ವಿರೋಧಿಸಿ ನಿವೃತ್ತ ನೌಕರರ ಸಂಘದಿಂದ ತಹಶೀಲ್ದಾರ್ ರವರಿಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ನಿವೃತ್ತ ನೌಕರರಿಗೆ ಮತ್ತು ಕುಟುಂಬದವರಿಗೆ ಪಿಂಚಣಿ ಸೌಲಭ್ಯಗಳನ್ನು ಕಡಿತಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತೀರ್ಮಾನ ತೆಗೆದುಕೊಂಡಿರುವುದನ್ನು ವಿರೋಧಿಸಿ ತಾಲ್ಲೂಕು ನಿವೃತ್ತ ನೌಕರರ ಸಂಘದಿಂದ ತಹಶೀಲ್ದಾರ್ ಮೂಲಕ ಸೋಮವಾರ ಪ್ರಧಾನಿಗೆ ಮನವಿ ರವಾನಿಸಲಾಯಿತು.

 

ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್‍ರವರು ದಿನಾಂಕ : 25-3-2025 ರಂದು ಲೋಕಸಭೆಯಲ್ಲಿ ಆರ್ಥಿಕ ಬಿಲ್ಲನ್ನು ಮಂಡಿಸುವ ಸಂದರ್ಭದಲ್ಲಿ ಸರ್ಕಾರಕ್ಕೆ ಎಂಟನೆ ವೇತನ ಆಯೋಗವು ವರದಿ ಸಲ್ಲಿಸಿದ ಮೇಲೆ 1-4-2026 ರ ನಂತರ ನಿವೃತ್ತಿ ಹೊಂದುವ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು  ಪರಿಷ್ಕರಿಸಲಾಗುವುದು ಆದರೆ 1-4-2025 ರ ಹಿಂದೆ ನಿವೃತ್ತಿಯಾಗಿರುವವರ ಪಿಂಚಣಿಯನ್ನು ಪರಿಷ್ಕರಿಸುವುದು ಕಷ್ಟವಾಗಿರುವುದರಿಂದ ಮುಂದಿನ ತುಟ್ಟಿ ಭತ್ಯೆಯನ್ನು ಮಂಜೂರು ಮಾಡುವುದು ಅಸಾಧ್ಯ ಎಂಬ ನಿರ್ಧಾರ ತೆಗೆದುಕೊಂಡಿರುವುದನ್ನು ನಾವುಗಳು ಖಂಡಿಸುತ್ತೇವೆಂದು ಮನವಿ ಸಲ್ಲಿಸಿದರು.

ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ, ಉಪಾಧ್ಯಕ್ಷ ಪಿ.ಎಸ್.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಹೆಚ್. ಸಹ ಕಾರ್ಯದರ್ಶಿ ತಿಪ್ಪೇಸ್ವಾಮಿ, ಸಂಘಟನಾ ಕಾರ್ಯದರ್ಶಿ ನೀಲಕಂಠಾಚಾರ್, ನಿರ್ದೇಶಕ ಪಿ.ನಾಗರಾಜ್ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...