ಸುದ್ದಿಒನ್, ಚಿತ್ರದುರ್ಗ. ಮಾ. 23 : ಕೇಂದ್ರ ಸರ್ಕಾರದ ಹೊಸ ಪಿಂಚಣಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ. 25ರಂದು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾಧ್ಯಕ್ಷ ಬಿ.ಪಿ. ಪ್ರೇಮನಾಥ್ ಹಾಗೂ ಕಾರ್ಯದರ್ಶಿ ಟಿ. ತಿಮ್ಮಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ನಿವೃತ್ತ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಹಾಗೂ ವಾರ್ಷಿಕ ಎರಡು ಹಂತದ ತುಟ್ಟಿಭತ್ಯೆ (ಡಿಎ) ನೀಡುವಲ್ಲಿ ಹೊಸ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರವು ನಿವೃತ್ತ ನೌಕರರ ಮತ್ತು ಅವರ ಕುಟುಂಬದ ಹಿತಾಸಕ್ತಿಗೆ ಧಕ್ಕೆ ತರಲಿದೆ ಎಂಬುದು ಸಂಘದ ಆತಂಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಘದ ಸೂಚನೆಯಂತೆ ಜಿಲ್ಲಾ ಘಟಕವು ಪ್ರತಿಭಟನೆಗೆ ಕರೆ ನೀಡಿದೆ.
ಮಾ. 25ರ ಬುಧವಾರ ಬೆಳಿಗ್ಗೆ 10:30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಮಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ಜಿಲ್ಲೆಯ ಎಲ್ಲಾ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಪ್ರೇಮನಾಥ್ ಹಾಗೂ ಕಾರ್ಯದರ್ಶಿ ಟಿ. ತಿಮ್ಮಪ್ಪ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











