ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ನೇಮಕ

1 Min Read

 

ಸುದ್ದಿಒನ್,  ಚಿತ್ರದುರ್ಗ, ಮಾರ್ಚ್. 02 : ಸುಪ್ರೀಂ ಕೋರ್ಟ್ ಆದೇಶದಂತೆ ಇದೀಗ ಮುರುಘಾ ಮಠದ ಆಡಳಿತ ಮಂಡಳಿಯನ್ನು ಸರ್ಕಾರ ಬದಲಾವಣೆ ಮಾಡಿದೆ.

ಗಡುವು ನೀಡಿದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಿದೆ. ಸರ್ಕಾರದ ಆದೇಶದಂತೆ ಮುರುಘಾ ಮಠದ ಆಡಳಿತಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ, ಆದೇಶ ಹೊರಡಿಸಿದೆ. ಜೊತೆಗೆ ಸಮಿತಿಯನ್ನು ನೇಮಕ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫೆಬ್ರವರಿ 27ರಂದು ಸುಪ್ರೀಂಕೋರ್ಟ್ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಮೂರು ದಿನಗಳಲ್ಲಿ ಸಮಿತಿ ರಚನೆ ಮಾಡಲು ಆದೇಶಿಸಿತ್ತು. ಅದರಂತೆ ಮಠ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮುರುಘಾ ಶರಣರು, ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹಿರಿಯೂರಿನ ಮಾಜಿ ಸಚಿವ ಹೆಚ್. ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಮಹತ್ವದ ತೀರ್ಪು ನೀಡಿ, ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಅದರಂತೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *