ಚಿತ್ರದುರ್ಗ, (ಮೇ.18) : ಗುಪ್ತಚರ ಇಲಾಖೆಯ ನಿವೃತ್ತ ಪಿ.ಎಸ್.ಐ ಸಮೀವುಲ್ಲಾ (64) ಅನಾರೋಗ್ಯದಿಂದ ಬುಧವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಅಂತ್ಯಕ್ರಿಯೆಯನ್ನು ಮೆದೇಹಳ್ಳಿ ರಸ್ತೆಯ ಖಬರಸ್ತಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಠಾಣೆಗೆ ಬಂದವರನ್ನು ತುಂಬಾ ಗೌರವದಿಂದ ನಡೆಸಿಕೊಳ್ಳುತ್ತಿದ್ದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಈ ಮೂಲಕ ಇಲಾಖೆಯಷ್ಟೇ ಅಲ್ಲದೇ ಸಾರ್ವಜನಿಕ ವಲಯದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು.
ಮೃತರ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು, ಸಿಬ್ಬಂದಿ ವರ್ಗ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.