Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುದ್ದಿಒನ್-ನೀರು ಉಳಿಸಿ ನೆಲದ ಋಣ ತೀರಿಸಿ ಅಭಿಯಾನ’ಕ್ಕೆ ನಿವೃತ್ತ ಹಿರಿಯ ಭೂವಿಜ್ಞಾನಿ ಜೆ. ಪರಶುರಾಮ ಪ್ರಶಂಸೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 26 : ‘ಸುದ್ದಿ ಒನ್’ ಹಮ್ಮಿಕೊಂಡಿರುವ ನೀರು ಉಳಿಸಿ ನೆಲದ ಋಣ ತೀರಿಸಿ ಜಾಗೃತಿ ಅಭಿಯಾನಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ವಾಹಿನಿಯ ಸಂಪಾದಕರಾದ ನಾಗೇಂದ್ರ ರೆಡ್ಡಿ ಅವರ ನೇತೃತ್ವದಲ್ಲಿ ಮೂಡಿಬರುತ್ತಿರುವ ಈ ಅಭಿಯಾನವು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ಮಾದರಿಯಲ್ಲಿದ್ದು, ತಮಗೆ ಅಪಾರ ಸಂತೋಷವನ್ನು ತಂದಿದೆ ಎಂದು ನಿವೃತ್ತ ಹಿರಿಯ ಭೂವಿಜ್ಞಾನಿ, ಚಿತ್ರದುರ್ಗ ಜಿಲ್ಲಾ ರೆಡ್ಡಿಜನಸಂಘದ ಕಾರ್ಯದರ್ಶಿ ಹಾಗೂ ಬೆಂಗಳೂರು ಸೌತ್ ಸೆಂಟರ್ (ಒ.) ಸದಸ್ಯರಾದ ಜೆ. ಪರಶುರಾಮ ಅವರು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

ಸುದ್ದಿ ಒನ್ ವಾಹಿನಿಯ ಸಂಪಾದಕ ನಾಗೇಂದ್ರರೆಡ್ಡಿಯವರು ಅಂತರ್ಜಲ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ಮಳೆ ನೀರು ಕೊಯ್ಲು, ಕೀಟನಾಶಕಗಳ ಮಿತಿ ಬಳಕೆ ಮತ್ತು ನೀರಿನ ಮರುಬಳಕೆ ಮುಂತಾದ ಎಚ್ಚರಿಕೆಗಳನ್ನು ಅನುಸರಿಸಬೇಕು ಹಾಗೂ ಮಾಲಿನ್ಯ ತಡೆಗಟ್ಟಲು ಕೈಗಾರಿಕಾ ತ್ಯಾಜ್ಯಗಳನ್ನು ಸಂಸ್ಕರಿಸಿ ಮಾಡುವ ಅವಶ್ಯಕತೆ ಬಗ್ಗೆ ಅಭಿಯಾನ ಪ್ರಾರಂಭಿಸಿ ಜನಸಾಮಾನ್ಯರಿಗೆ ಅರ್ಥಮಾಡಿಕೊಳ್ಳುವ ಮಾದರಿಯಲ್ಲಿ ತಮ್ಮ ಸುದ್ದಿ ವಾಹಿನಿಯಲ್ಲಿ ಪ್ರಕಟಣೆ ಮಾಡುತ್ತಿರುವ ವಿಚಾರ ನನಗೆ ತುಂಬ ಸಂತೋಷ ತಂದಿದೆ ಎಂದು ಜೆ. ಪರಶುರಾಮ ತಿಳಿಸಿದ್ದಾರೆ.

ಅಂತರ್ಜಲ ಜಾಗೃತಿ ಎಂದರೆ ಅಂತರ್ಜಲದ ಪ್ರಾಮುಖ್ಯತೆ, ಅದರ ಅತಿಯಾದ ಬಳಕೆಯಿಂದಾಗುವ ದುಷ್ಪರಿಣಾಮಗಳು ಮತ್ತು ಅದನ್ನು ಸಂರಕ್ಷಿಸುವ ವಿಧಾನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು. ಭವಿಷ್ಯದ ನೀರಿನ ಬಿಕ್ಕಟ್ಟನ್ನು ತಡೆಯಲು ಮತ್ತು ಪರಿಸರ ಸಮತೋಲನವನ್ನು ಕಾಪಾಡುವುದು ಅತ್ಯಂತ ಅವಶ್ಯಕತೆಯಾಗಿದೆ ಎಂದು ಹೇಳಿದ್ದಾರೆ.

ಅಂತರ್ಜಲದ ಸಂರಕ್ಷಣೆಗೆ ಸಂಬಂಧಪಟ್ಟಂತೆ ನಾನು ಈಗಾಗಲೇ ಸಾಕಷ್ಟು ಲೇಖನಗಳನ್ನು ಸುದ್ದಿ ಒನ್ ನಲ್ಲಿ ಪ್ರಕಟಿಸಿದ್ದು, ಈ ಲೇಖನಗಳ ಉಪಯೋಗ ರೈತರಿಗೆ ಮತ್ತು ಜನಸಾಮಾನ್ಯರಿಗೆ ಉಪಯೋಗವಾಗಿರಬಹುದೆಂದು ನನ್ನ ಅನಿಸಿಕೆಯಾಗಿದೆ. ಸುದ್ದಿ ಒನ್ ವಾಹಿನಿಯ ಆನ್ ಲೈನ್ ಸಂಪಾದಕರು ಇನ್ನು ಹೆಚ್ಚಿನ ರೀತಿಯಲ್ಲಿ ಜನಸಾಮಾನ್ಯರಲ್ಲಿ ಜಾಗೃತಿ ಅರಿವು ಮೂಡಿಸಲು ಮುಂದುವರೆಸಿ, ಮುಂದಿನ ಪೀಳಿಗೆಗೆ ಅಂತರ್ಜಲ ಲಭ್ಯತೆಗೆ ಒತ್ತು ನೀಡಬೇಕಾಗಿ ವಿನಂತಿಸಿದ್ದಾರೆ. ಜೊತೆಗೆ, ತಮ್ಮ ಇಂತಹ ಸಮಾಜ ಸೇವೆಯಿಂದ ತಮಗೆ ದೇವರು ಒಳ್ಳೆಯದು ಮಾಡಲೆಂದು ಹಾರೈಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now