Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಯೋನಿವೃತ್ತಿ: ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

---Advertisement---

 

ಚಿತ್ರದುರ್ಗ: ಸುದೀರ್ಘ 37 ವರ್ಷಗಳ ಕಾಲ ವಿವಿಧ ಇಲಾಖೆ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್ ಅವರಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸಿ.ಜಿ.ಶ್ರೀನಿವಾಸ್ ಅವರು ದ್ವಿತೀಯ ದರ್ಜೆ ಸಹಾಯಕರಾಗಿ, ಪ್ರಥಮ ದರ್ಜೆ ಲೆಕ್ಕ ಸಹಾಯಕ, ಲೆಕ್ಕ ಅಧೀಕ್ಷಕರು, ಲೆಕ್ಕ ಪರಿಶೋಧನಾ ಅಧಿಕಾರಿಗಳು, ಲೆಕ್ಕಾಧಿಕಾರಿ, ಹಿರಿಯ ಉಪನಿರ್ದೇಶಕರು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಾಗಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ, ಸುದೀರ್ಘ ಅವಧಿಗೆ ನಿಷ್ಠೆಯಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿ.ಜಿ.ಶ್ರೀನಿವಾಸ್ ಅವರು ತಮ್ಮ ಸೇವಾವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅನುಪಮ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಪದಾಧಿಕಾರಿಗಳಾದ ವಿಮಲಾ ನಾಗರಾಜ್, ಹರೀಶ್, ಸುಮಂತ್, ಪೊಲೀಸ್ ರವಿ, ಒ.ಬಿ.ಬಸವರಾಜ್, ರವಿಕುಮಾರ್, ಟಿ.ರಂಜಿತಾ, ಹೆಚ್.ತಿಪ್ಪಯ್ಯ, ಸತೀಶ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...