ಚಿತ್ರದುರ್ಗ, (ಮಾರ್ಚ್.11) : ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು “ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಜಿಲ್ಲೆಯಲ್ಲಿ ಮಾರ್ಚ್ 12ರಂದು ಬೆಳಿಗ್ಗೆ 11ಕ್ಕೆ ಚಾಲನೆ ದೊರೆಯಲಿದೆ.
ಆಯಾ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಏಕಕಾಲದಲ್ಲಿ ಚಾಲನೆ ನೀಡುವರು. ಕಂದಾಯ ಇಲಾಖೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ
ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಕುಂಚಿಗನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಚಿಗನಾಳ್ ಗ್ರಾಮ,
ಚಳ್ಳಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರ್ಲುಕಟ್ಟೆ ಗ್ರಾಮ,
ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಸೋಮೆರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗಲಕುಂಟೆ ಗ್ರಾಮ,
ಹೊಳಲ್ಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಮಲ್ಲಾಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಾಡಿಹಳ್ಳಿ ಗ್ರಾಮ,
ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಎಸ್.ನೇರಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ನೇರಲಕೆರೆ ಗ್ರಾಮ ಹಾಗೂ
ಮೊಳಕಾಲ್ಮುರು ತಾಲ್ಲೂಕಿನ ಕಸಬಾ ಹೋಬಳಿಯ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲೆನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
“ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆ ಕಾರ್ಯಕ್ರಮದಲ್ಲಿ ರೈತರ ಮನೆ ಬಾಗಿಲಿಗೆ ಹೋಗಿ ದಾಖಲೆಗಳನ್ನು ರೈತರಿಗೆ ಮುದ್ದಾಂ ತಲುಪಿಸಲಾಗುವುದು. ಒಂದು ವೇಳೆ ದಾಖಲೆಗಳು ಮುದ್ರಣವಾಗದೇ ರೈತರಿಗೆ ದಾಖಲೆಗಳನ್ನು ಮುದ್ದಾಂ ತಲುಪಿಸಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಅಂತಹ ರೈತರಿಗೆ ಒಂದು ವಾರ ಮಾರ್ಚ್ 21 ರಿಂದ 26 ರವರೆಗೆ ನಾಡಕಚೇರಿಯಲ್ಲಿ ಉಚಿತವಾಗಿ ದಾಖಲೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.