ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮುತ್ತಪ್ಪ ರೈ ಪುತ್ರನ ಮೇಲೆ ನಿನ್ನೆ ಗುಂಡಿನ ದಾಳಿ ನಡೆದಿದೆ. ಬಿಡದಿಯ ಮನೆಯಲ್ಲಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ತಕ್ಷಣವೇ ರಿಕ್ಕಿ ರೈ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿದೆ. ಮೂಗು ಮತ್ತು ಭುಜಕ್ಕೆ ಗುಂಡಿನ ದಾಳಿಯಿಂದಾಗಿ ಹೆಚ್ಚು ಗಾಯವಾಗಿದೆ. ಕೊಂಚ ಚೇತರಿಸಿಕೊಂಡಿರುವ ರಿಕ್ಕಿ ರೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಾಳಿ ನಡೆಸಿದವರ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ತನಿಖೆಯನ್ನು ಚುರುಕುಗೊಳಿಸಿರುವ ಬಿಡದಿ ಪೊಲೀಸರು ರಿಕ್ಕಿ ರೈ ನೀಡಿರುವ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ರಿಕ್ಕಿ ರೈ ಹೇಳಿಕೆ ನೀಡಿರುವಂತೆ ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ಇವರೇ ನನ್ನ ಮೇಲೆ ಅಟ್ಯಾಕ್ ಮಾಡಿಸಿರುವುದು ಎಂದು ಹೇಳಿಕೆ ನೀಡಿದ್ದಾರಂತೆ. ರಿಕ್ಕಿ ರೈ ಹೇಳಿಕೆ ನೀಡುವುದಕ್ಕೂ ಮುನ್ನವೇ ಈ ನಾಲ್ವರ ಮೇಲೂ ಎಫ್ಐಆರ್ ಕೂಡ ದಾಖಲಾಗಿತ್ತು. ಅಷ್ಟೇ ಅಲ್ಲ ಈ ಅಟ್ಯಾಕ್ ಗೆ ಆಸ್ತಿ ವಿಚಾರವೇ ಕಾರಣ ಎನ್ನಲಾಗಿದೆ.
ರಿಕ್ಕಿ ರೈ ನೀಡಿರುವ ಹೇಳಿಕೆ ಪ್ರಕಾರ, ನಾನು ರಷ್ಯಾದಲ್ಲಿದ್ದೆ. ಜಾಮೀನು ವಿವಾದ ಕೋರ್ಟ್ ನಲ್ಲಿದೆ. ಕೇಸ್ ಇದ್ದ ಕಾತಣ ಬೆಂಗಳೂರಿಗೆ ಬಂದಿದ್ದೆ. ಸದಾಶಿವನಗರ ಹಾಗೂ ಬಿಡದಿಯಲ್ಲಿ ಇರುತ್ತೇನೆ. ಬೆಳಗ್ಗೆ ಎರಡು ಕಾಲ್ ಬಂತು. ಬಿಡದಿ ಮನೆಯಿಂದ ಹೊರಟಾಗ ಹೊರಗಡೆ ಬಂದ ಕೂಡಲೇ ನನ್ನ ಮೇಲೆ ಅಟ್ಯಾಕ್ ಮಾಡಲಾಗಿದೆ. ನನ್ನ ಕೈ ಹಾಗೂ ಮೂಗಿಗೆ ಗುಂಡು ತಗುಲಿದೆ. ನನ್ನ ಡ್ರೈವರ್ ಹಾಗೂ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದರು. ರಾಕೇಶ್ ಮಲ್ಲಿ ಹಾಗೂ ಅನುರಾಧ ಅವರೇ ಅಟ್ಯಾಕ್ ಮಾಡಿಸಿದ್ದಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್