ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಶುಕ್ರವಾರ ಬೆಳಿಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ.
ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Rishabh Pant is shifted to AIIMS Rishikesh. His condition is said to be serious and he is being treated for head and leg injuries. Rishabh Pant's car met with an accident while traveling back home from Delhi. #RishabhPant #PantCarCrash #PantAccident pic.twitter.com/i8OIKHc4nZ
— shashank singh (@shashank_singh2) December 30, 2022
BREAKING: CRICKETER RISHABH PANT CAR CRASH
Rishabh Pant Injured As His Car Collides With Divider In Uttarakhand.
Pant's car catches fire after the accident. Incident happened while he was travelling from Uttarakhand to Delhi.#RishabhPant #Pantcarcrash #pantaccident #pantinjured pic.twitter.com/MlJ50gptN4— shashank singh (@shashank_singh2) December 30, 2022
#RishabhPant got in an accident traveling from Delhi to roorkee pic.twitter.com/1AVeKWr7Hu
— cricket_for_life (@bannerman165) December 30, 2022
ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉತ್ತರಾಖಂಡ್ನ ರೂರ್ಕಿ ಬಳಿ ಅಪಘಾತಕ್ಕೀಡಾದ ತನ್ನ BMW ಕಾರನ್ನು ಪಂತ್ ಓಡಿಸುತ್ತಿದ್ದ ಎಂದು ತಿಳಿದು ಬಂದಿದೆ.