Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಸ್ತೆ ಅಪಘಾತ : ಕ್ರಿಕೆಟಿಗ ರಿಷಬ್ ಪಂತ್ ಗೆ ತೀವ್ರ ಗಾಯ

Facebook
Twitter
Telegram
WhatsApp

ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಶುಕ್ರವಾರ ಬೆಳಿಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ.

ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.  ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉತ್ತರಾಖಂಡ್‌ನ ರೂರ್ಕಿ ಬಳಿ ಅಪಘಾತಕ್ಕೀಡಾದ ತನ್ನ BMW ಕಾರನ್ನು ಪಂತ್ ಓಡಿಸುತ್ತಿದ್ದ ಎಂದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!