ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ರಿಷಬ್ ಪಂತ್ ಕಾರು ಭೀಕರವಾಗಿ ಅಪಘಾತಕ್ಕೀಡಾಗಿದ್ದು, ತಲೆ, ಬೆನ್ನು, ಹಣೆ, ಮೊಣಕಾಲಿಗೆ ಪೆಟ್ಟಾಗಿದೆ. ಪ್ರಾಣಪಾಯವೇನು ಇಲ್ಲ, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ ಅವರ ಕ್ರಿಕೆಟ್ ಕನಸು ಏನಾಗಬಹುದು ಎಂಬ ಆತಂಕ ಅಭಿಮಾನಿಗಳಲ್ಲಿದೆ. ಈ ವಿಚಾರವಾಗಿ ಇಂದು ಎಲ್ಲಾ ಪರೀಕ್ಷೆಯ ನಂತರ ತಿಳಿಯಲಿದೆ.
ಇಂದು ರಿಷಬ್ ಪಂತ್ ಅವರ ಮೊಣಕಾಲಿನ ಸ್ಕ್ಯಾನ್ ಮಾಡಲಾಗುತ್ತದೆ. ಬಳಿಕ ವರದಿ ಬಂದ ಬಳಿಕ ದಿಷಬ್ ಅವರ ಕಾಲಿನ ಸ್ಥಿತಿ ಹೇಗಿರಲಿದೆ ಎಂಬುದನ್ನು ತಿಳಿಸಲಾಗುತ್ತದೆ. ನಿನ್ನೆ ಪಾದ ಊದಿಕೊಂಡಿದ್ದ ಕಾರಣ ಸ್ಕ್ಯಾನಿಂಗ್ ಮಾಡಿರಲಿಲ್ಲ. ನಿನ್ನೆ ಮೆದುಳು ಹಾಗೂ ಬೆನ್ನು ಮೂಳೆಯ ಸ್ಕ್ಯಾನಿಂಗ್ ಮಾಡಲಾಗಿತ್ತು. ಅದರಲ್ಲಿ ಯಾವುದೇ ಸಮಸ್ಯೆ ಕಂಡಿರಲಿಲ್ಲ.
ಇಂದು ನಡೆಯುವ ಸ್ಕ್ಯಾನಿಂಗ್ ಅವರ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸಲಿದೆ. ಏನಾದರೂ ಹೆಚ್ಚಿನದಾಗಿ ಸಮಸ್ಯೆ ಕಂಡು ಬಂದಲ್ಲಿ, ಅವರ ಕ್ರಿಕೆಟ್ ವೃತ್ತಿ ಜೀವನದ ಮೇಲೆ ಕಷ್ಟ ತಂದೊಡ್ಡಲಿದೆ. ಹೀಗಾಗಿ ಅವರ ಅಭಿಮಾನಿಗಳೆಲ್ಲಾ ಪ್ರಾರ್ಥನೆ ಮಾಡುತ್ತಿದ್ದಾರೆ. ರಿಷಬ್ ಪಂತ್ ಅವರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ದೇವರ ಮೊರೆ ಹೋಗಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…