ಸುದ್ದಿಒನ್ ವೆಬ್ ಡೆಸ್ಕ್
ಲಂಡನ್ : ಬ್ರಿಟನ್‌ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ಸಂಸದ ರಿಷಿ ಸುನಕ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇಲ್ಲಿಯವರೆಗೆ ಸ್ಪರ್ಧೆಯಲ್ಲಿದ್ದ ಪೆನ್ನಿ ಮೊರ್ಡಾನ್ ರೇಸ್‌ನಿಂದ ಹೊರಬಿದ್ದಿದ್ದರಿಂದ ರಿಷಿ ಸುನನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಬ್ರಿಟನ್ ಪ್ರಧಾನಿಯಾದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿ ರಿಷಿ ಸುನಕ್ ಇತಿಹಾಸ ನಿರ್ಮಿಸಿದ್ದಾರೆ.
ಬ್ರಿಟಿಷ್ ಸಂಸತ್ತಿನಲ್ಲಿ ಸುನಕ್ 193 ಸಂಸದರ ಬೆಂಬಲವನ್ನು ಹೊಂದಿದ್ದರೆ, 27 ಸಂಸದರು ಮಾತ್ರ ಮೊರ್ಡಾನ್ ಅವರನ್ನು ಬೆಂಬಲಿಸಿದ್ದರು. ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲಿಜ್ ಟ್ರಸ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವುದು ಗೊತ್ತೇ ಇದೆ. ಟ್ರಸ್ ರಾಜೀನಾಮೆಯಿಂದ ಉಂಟಾದ ರಾಜಕೀಯ ಬಿಕ್ಕಟ್ಟಿನಲ್ಲಿ, ಟೋರಿ ಸದಸ್ಯರು ಈ ಬಾರಿ ರಿಷಿ ಕಡೆಗೆ ತಿರುಗಿದರು. ತನ್ನ ದೇಶವನ್ನು ಬಿಕ್ಕಟ್ಟಿನಿಂದ ರಕ್ಷಿಸಬಹುದೆಂದು ಅವರು ನಂಬಿದ್ದರು. ಇದು ರಿಷಿ ಸುನಕ್‌ಗೆ ಬ್ರಿಟನ್‌ನ ಆಡಳಿತವನ್ನು ವಹಿಸಿಕೊಳ್ಳುವ ಅಪರೂಪದ ಅವಕಾಶವನ್ನು ನೀಡಿದಂತಾಯಿತು.
► ರಿಷಿ ಸುನಕ್ ಅವರಿಗೆ 42 ವರ್ಷ. 2020 ರಲ್ಲಿ, ಬೋರಿಸ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಅವರು ಮೊದಲ ಕ್ಯಾಬಿನೆಟ್‌ನಲ್ಲಿ ಹಣಕಾಸು ಸಚಿವರಾಗಿ ನೇಮಕಗೊಂಡರು.
► ರಿಷಿ ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ವ್ಯಾಪಾರಿಗಳು ಮತ್ತು ಕಾರ್ಮಿಕರಿಗೆ ನೂರಾರು ಕೋಟಿ ಪೌಂಡ್‌ಗಳ ಪ್ಯಾಕೇಜ್ ಅನ್ನು ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ.
► ರಿಷಿಯ ಅಜ್ಜಿಯರು ಪಂಜಾಬ್ ಮೂಲದವರು. ರಿಷಿ ಅವರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದಾರೆ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…