ಚಿತ್ರದುರ್ಗ | ಎತ್ತಿನಗಾಡಿಗೆ ಲಾರಿ ಡಿಕ್ಕಿ, ಓರ್ವನ ಸಾವು

suddionenews
0 Min Read

ಚಿತ್ರದುರ್ಗ, (ಮಾ.23) : ರಾ.ಹೆ 150ಎ ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ.

ರಸ್ತೆಯಲ್ಲಿ ಹಾದುಹೋಗುತ್ತಿದ್ದ ಎತ್ತಿನಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಹಿರೇಹಳ್ಳಿಯ ರೈತ ತಿಪ್ಪೇಸ್ವಾಮಿ(40) ಸಾವನ್ನಪ್ಪಿದ್ದು, ಮತ್ತೋರ್ವ ರೈತ ಸುರೇಶ ಹಾಗೂ 2 ಎತ್ತುಗಳಿಗೆ ಗಾಯಗಳಾಗಿವೆ. ಗಾಯಾಳು ಸುರೇಶ ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *