ಚಿಕ್ಕಬಳ್ಳಾಪುರ : ಪಂಚರ್ ಆಗಿದ್ದ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ, ಟೈರ್ ಬದಲಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರಣೀಶ್, ನಿರಂಜನ್ ಸಿಂಗ್ ಮೃತ ದುರ್ದೈವಿಗಳು.

ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿಯಲ್ಲಿ ನಡೆದಿದೆ. 22 ವರ್ಷದ ಧರಣೀಶ್, 52 ವರ್ಷದ ನಿರಂಜನ್ ಸಿಂಗ್ ಮೂಲತಃ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯವರು. ಈ ಇಬ್ಬರು ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದರು.
ಈ ವೇಳೆ ಗಾಡಿ ಪಂಚರ್ ಆಗಿದೆ. ಕಾರಿನಲ್ಲಿ ಐದು ಜನ ಪ್ರವಾಸ ಮಾಡುತ್ತಿದ್ದರು. ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪಂಚರ್ ಹಾಕಲು ಮುಂದಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ಮೂವರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಮಾಡಿದಾತ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪೇರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
