ಸುದ್ದಿಒನ್, ಚಿತ್ರದುರ್ಗ, (ಜು.23) : ತಾಲ್ಲೂಕಿನ ಮದಕರಿ ಪುರದ ಬಳಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾನ್ಹ ನಡೆದಿದೆ.ಮೃತನನ್ನು ಮದಕರಿ ಪುರ ಗ್ರಾಮದ ವಾಸಿ ನರಸಿಂಹ ಸ್ವಾಮಿ ಎಂದು ಗುರುತಿಸಲಾಗಿದೆ.
ಈ ವೇಳೆ ಶಾಸಕ ಕೆ.ಸಿ. ವೀರೇಂದ್ರ ಅವರು ಅದೇ ರಸ್ತೆಯ ಮೂಲಕ ಹಾದುಹೋಗುತ್ತಿದ್ದರು. ಅಪಘಾತವಾಗಿರುವುದನ್ನು ಗಮನಿಸಿ ಕೂಡಲೇ ನೆರವಿಗೆ ಧಾವಿಸಿದರು. ಅಷ್ಟರಲ್ಲಾಗಲೇ ಬೈಕ್ ಸವಾರ ಸಾವನ್ನಪ್ಪಿದ್ದರೆಂದು ಸ್ಥಳೀಯರು ತಿಳಿಸಿದರು.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












