ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳು ಜಾಸ್ತಿನೆ ಇದಾವೆ. ಉದ್ಯಮಿ ಕಿರಣ್ ಮಜುಂದಾರ್ ಗುಂಡಿಗಳ ಬಗ್ಗೆ ಮಾತನಾಡಿದ್ದಾರೆ. ಯಾಕೆ ಬೆಂಗಳೂರು ನಗರದ ರಸ್ತೆಗಳು ಹಾಳಾಗಿವೆ..? ಕಂಡ ಕಂಡಲ್ಲಿ ಕಸದ ರಾಶಿ ಇದೆ..? ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೆ ಎಂದು ಚೀನಾದಿಂದ ಬಂದ ಉದ್ಯಮಿಯೊಬ್ಬರು ಪ್ರಶ್ನೆ ಮಾಡಿದರು ಎಂದು ಕಿರಣ್ ಹೇಳಿದ್ದರು.
ಈ ಸಂಬಂಧ ಡಿಸಿಮ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿ ಇದಾವೆ. ಈಗಾಗಲೇ ಅದರತ್ತ ನಾವೂ ಗಮನ ಹರಿಸಿದ್ದೇವೆ. ರಸ್ತೆ ದುರಸ್ತಿಗೆ ಈಗಾಗಲೇ 1,100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ರಸ್ತೆ ಗುಂಡಿಗಳನ್ನ ಗುರುತಿಸಿದ್ದೇವೆ. ಆ ಪೈಕಿ ಐದು ಸಾವಿರ ಗುಂಡಿಗಳನ್ನ ಮುಚ್ಚಿದ್ದೇವೆ. ಮಹತ್ವದ ಯೋಜನೆಯ ಕೆಲಸ ಕಾರ್ಯಗಳು ಮುಂದುವರೆದಿದ್ದು, ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ಈ ಭಾಗದ ಐಟಿ ಬಿಟಿ ಕಂಪನಿಗಳಿಗೆ ಇದರಿಂದ ಸಹಾಯ ಆಗ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಾಕಷ್ಟು ಗುಂಡಿಗಳಿದ್ದು, ವಾಹನ ಸವಾರರಿಗಂತು ದೊಡ್ಡ ಸಮಸ್ಯೆಯೇ ಆಗಿದೆ. ಎಷ್ಟೋ ಕಡೆ ಗಾಡಿಗಳಲ್ಲಿ ಹೋಗುವಾಗ ಬಿದ್ದಿದ್ದಾರೆ. ಹೀಗಾಗಿ ಗುಂಡಿಗಳನ್ನು ಮುಚ್ಚುವ ಕೆಲಸವನ್ನ ಸರ್ಕಾರ ಕೈಗೆತ್ತಿಕೊಂಡಿದೆ. ಇದರ ನಡುವೆಯೇ ಕಿರಣ್ ಮಜುಂದಾರ್ ಈ ರೀತಿ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











