ಚಿತ್ರದುರ್ಗ.ಜ.17: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025ರ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಶಿವಮೊಗ್ಗ ವಿಭಾಗದ ಉಪಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಉದ್ಘಾಟನೆ ನೆರವೇರಿಸಿ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಚಿತ್ರ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಿಂಗೆ, ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್, ಮೋಟಾರು ವಾಹನ ನಿರೀಕ್ಷಕ ಪ್ರಕಾಶ ಹಾಗೂ ಅಧೀಕ್ಷಕ ಸಿ.ಡಿ.ಹೇಮಂತ್ ಕುಮಾರ್ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















