Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾವರ್ಕರ್, ಹೆಡ್ಗೆವಾರ್ ಬಗ್ಗೆ ಸಾಕ್ಷ್ಯ ಒದಗಿಸಲು ಸಿದ್ಧ ಅಂತಿದ್ದಾರೆ ರೋಹಿತ್ ಚಕ್ರತೀರ್ಥ..!

---Advertisement---

 

ಸದ್ಯಕ್ಕೆ ರಾಜ್ಯದಲ್ಲಿ ಪಠ್ಯ ಪುಸ್ತಕದ ವಿಚಾರ ಸಾಕಷ್ಟು ಸದ್ದು ಮಾಡ್ತಾ ಇದೆ. ಬಿಜೆಪಿ ಸರ್ಕಾರವಿದ್ದಾಗ ರೋಹಿತ್ ಚಕ್ರತೀರ್ಥ ಪರಿಷ್ಕರಣೆಯ ತಂಡದಲ್ಲಿದ್ದರು. ಹೀಗಾಗಿ ಆ ಟೀಂ ತೆಗೆದು ಹಾಕಿದ್ದ ಒಂದಷ್ಟು ಪಠ್ಯಗಳನ್ನು ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಅಳವಡಿಸಲಾಗಿದೆ. ಈ ಬಗ್ಗೆ ರೋಹಿತ್ ಚಕ್ರತೀರ್ಥ ಮಾತನಾಡಿದ್ದು, ಸಾವರ್ಕರ್, ಹೆಡ್ಗೆವಾರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ನನ್ನ ಬಳಿ ಸಾಕ್ಷ್ಯಗಳಿವೆ ಎಂದಿದ್ದಾರೆ.

ಅವರ ಪಾಠ ತೆಗೆಯಲು ಸರ್ಕಾರ ಮುಂದಾಗಿದೆ. ಯಾಕೆ ಅಂದ್ರೆ ಅದನ್ನ ಸರ್ಕಾರಕ್ಕೆ ನೀವೇ ಕೇಳಬೇಕು. ಇವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎನ್ನುವುದಕ್ಕೆ ಯಾರಿಗೂ ಸಾಧ್ಯವಿಲ್ಲ‌. ಅದಕ್ಕೆ ಸೂಕ್ತ ದಾಖಲೆ ಒದಗಿಸಲು ನಾನು ಸಿದ್ಧನಿದ್ದೇನೆ. ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ನಮ್ಮ ಪಠ್ಯ ಪುಸ್ತಕದಲ್ಲಿ ಈ ಇಬ್ಬರು ದಿಗ್ಗಜರ ಪಾಠ ಸೇರಿಸಿದ್ದೆವು‌. ಈಗ ಅದನ್ನು ಸರ್ಕಾರ ತೆಗೆಯಲು ಮುಂದಾಗಿದೆ.

ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...