Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ : ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ, ಸೆಪ್ಟೆಂಬರ್ 05: ಶಿಕ್ಷಣ ಕೇವಲ ವ್ಯಕ್ತಿಯನ್ನು ಪರಿವರ್ತನೆ ಮಾಡುವುದು ಮಾತ್ರವಲ್ಲದೇ, ರಾಷ್ಟ್ರ ನಿರ್ಮಾಣದಲ್ಲಿಯೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ-2022 ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿರು.

ಸಮಾಜದಲ್ಲಿ ಗುರುವಿನ ಬಗ್ಗೆ ಹೆಚ್ಚಿನ ಗೌರವಿದೆ. ಗುರಿವಿನ ಬೋಧನೆ, ಮೌಲ್ಯಗಳು, ಸಂಸ್ಕಾರ ಹಾಗೂ ಜೀವನ ಪದ್ಧತಿ ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲಿದೆ. ವಿದ್ಯಾರ್ಥಿಗಳು ಮತ್ತು ಸಮಾಜ ಶಿಕ್ಷಕರಿಗೆ ಗುರುವಿನ ಸ್ಥಾನ ನೀಡಿ, ಬಹಳಷ್ಟು ಗೌರವ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ ಎಂದರು.

ಒಬ್ಬ ಶಿಕ್ಷಕ ದೇಶದ ರಾಷ್ಟ್ರಪತಿ ಆಗಬಹುದು ಎಂಬುದನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ತೋರಿಸಿ ಕೊಟ್ಟಿದ್ದಾರೆ. ಸಮಾಜದಲ್ಲಿ ಮಕ್ಕಳನ್ನು ಉತ್ತಮ ಪ್ರಜೆಗಳಾನ್ನಾಗಿಸುವ ಪಾತ್ರ ಶಿಕ್ಷಕರ ಮೇಲಿದೆ. ಶಿಕ್ಷಕರು ಮಕ್ಕಳ ಅಭಿವೃದ್ಧಿಗಾಗಿ ಹಾಗೂ ಅವರ ಏಳಿಗಾಗಿ ಕೆಲಸ ಮಾಡುತ್ತಿದ್ದಾರೆ. ದೇಶದ ಮೂಲೆ ಮೂಲೆಗಳಲ್ಲಿ ಇದು ಶಿಕ್ಷಕರ ದಿನಾಚರಣೆ ಆಚರಣೆಯನ್ನು ಮಾಡಲಾಗುತ್ತಿದೆ. ದೇಶದಲ್ಲಿ ಶಿಕ್ಷಕರ ಕಾರ್ಯ ಸಾಕಷ್ಟು ಮಹತ್ವ ಪಡೆದಿದೆ.  ಶಿಕ್ಷಕರು ಸಾಮಾಜಿಕ ಚಿಂತನೆ, ಏಕಾಗ್ರತೆಯಿಂದ ಶಿಕ್ಷಣ ನೀಡುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ ರಾಷ್ಟ್ರೀಯ ಪ್ರಶಸ್ತಿಗೆ ಒಬ್ಬರು ಮತ್ತು ರಾಜ್ಯಮಟ್ಟಕ್ಕೆ ಇಬ್ಬರು ಶಿಕ್ಷಕರು ಆಯ್ಕೆಯಾಗಿರುವುದು ಹಾಗೂ  ಶಿಕ್ಷಣ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿಯೂ ಕೂಡ ಕೆಲವು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ, ವಿಶೇಷ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಈ ಮೊದಲು ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಿತ್ತು. ಜಾಗತೀಕರಣದ ನಂತರ ವಿಶ್ವದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೂ ವಿಶ್ವ ಮಾನವನಾಗಿ ಬೆಳೆಯಬಹುದು. ಯಾವುದೇ ದೇಶದ ನಾಗರೀಕ ಬದುಕಲು ಜ್ಞಾನವನ್ನು ಸಮರ್ಪಣೆ ಮಾಡಬಹುದು. ಆ ಜ್ಞಾನಾರ್ಜನೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
20ನೇ ಶತಮಾನದ ಬಳಿಕ ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಲಿಲ್ಲ. ಶಿಕ್ಷಣದಿಂದ ಅನೇಕ ಬದಲಾವಣೆಗಳು ಆಗಿವೆ. ಶಿಕ್ಷಕರ ಸಮಸ್ಯೆಗಳು ಸಾಕಷ್ಟಿವೆ. ಆದರೆ ಸರ್ಕಾರದ ಸವಲತ್ತುಗಳನ್ನು ನಿರೀಕ್ಷಿಸದೆ ಇಂದು ಶಿಕ್ಷಕರು ತಮ್ಮ ಶಾಲೆಗಳನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ದೇಶದ ಬುನಾದಿ ಕಟ್ಟುವ ಶಿಕ್ಷಕರ ಸಮಸ್ಯೆಗಳಿಗೆ ನಾವು ಮೊದಲು ಆದ್ಯತೆ ನೀಡಬೇಕು. ಹಳ್ಳಿಗಾಡಿನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿದ್ದರೂ ಶಿಕ್ಷಕರು ಮಕ್ಕಳಿಗೆ ಕಲಿಸುವ ಆಸಕ್ತಿಯನ್ನು ಕುಗ್ಗಿಸಿಕೊಂಡಿಲ್ಲ. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದರ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ಶಿಕ್ಷಕರಿಗೆ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಆ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯ ಸಚೇತಕರಾದ ಡಾ.ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದ ವೃತ್ತಿ. ಇದಕ್ಕೆ ಸರಿಸಮಾನವಾದದ್ದು ಯಾವುದು ಇಲ್ಲ. ಶಿಕ್ಷಣದಿಂದ ಮಾತ್ರ ಎಲ್ಲವನ್ನು ಪಡೆಯಲು ಸಾಧ್ಯವಿದೆ ಎಂಬುದನ್ನು ನೆಲ್ಸನ್ ಮಂಡೇಲಾ ಅವರು ತಿಳಿಸಿದ್ದಾರೆ. ಇದನ್ನು ಎಲ್ಲರೂ ಅರ್ಥೈಸಿಕೊಂಡು ಜೀವನ ನಡೆಸಬೇಕು ಎಂದು ತಿಳಿಸಿದರು.

ಸರ್ಕಾರ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸಮಯ ತೆಗೆದುಕೊಳ್ಳುತ್ತಿದ್ದು, ಹಂತ ಹಂತವಾಗಿ ಸಮಸ್ಯೆ ಬಗೆಹರಿಸುತ್ತಿದೆ. ಶಿಕ್ಷಕರನ್ನು ಜಾತಿ ಜನಗಣತಿ, ಚುನಾವಣೆ ಸೇರಿ ಇನ್ನಿತರೆ ಕೆಲಸಗಳಿಗೆ ಬಳಸಿಕೊಳ್ಳುವುದನ್ನು ಬಿಟ್ಟು ಕೇವಲ ಪಾಠ ಮಾಡಲು ಮಾತ್ರ ಬಳಸಿಕೊಳ್ಳಬೇಕು ಎಂದ ಹೇಳಿದ ಅವರು, ಶಿಕ್ಷಕರು ತಪ್ಪು ಮಾಡಿದರೆ ಸಮಾಜದ ಇಡೀ ವ್ಯವಸ್ಥೆಯೇ ಹಾಳಾಗಲಿದೆ. ಆದ್ದರಿಂದ ಯಾವುದೇ ಹಂತದಲ್ಲಿಯೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕನ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ. ನಮ್ಮ ದೇಶದಲ್ಲಿ ವಿಜ್ಞಾನಿಗಳು ಹಾಗೂ ಉನ್ನತ ಮಟ್ಟಕ್ಕೆ ಏರಿರುವ ವ್ಯಕ್ತಿಗಳ ಹಿಂದೆ ಶಿಕ್ಷಕರ ಶ್ರಮ ಬಹಳಷ್ಠಿದೆ. ದ್ರೌಪದಿ ಮುರ್ಮ ಅವರು ಸಹ ಶಿಕ್ಷಕಿ ವೃತ್ತಿ ನಿರ್ವಹಿಸಿ ಇಂದು ರಾಷ್ಟ್ರಪತಿಯಾಗಿ ಶಿಕ್ಷಕರ ವೃತ್ತಿಗೆ ಗೌರವ ತಂದಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ವಿಶೇಷ ಶಿಕ್ಷಕರಿಗೆ ಸನ್ಮಾನ ಮತ್ತು 2021-22ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೂ ಸನ್ಮಾನ ಮಾಡಲಾಯಿತು.
ಶಿಕ್ಷಕರ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಕಲಾ ತಂಡಗಳೊಂದಿಗೆ ಆರಂಭವಾದ ಮೆರವಣಿಗೆಯು ತರಾಸು ರಂಗಮಂದಿರದವರೆಗೂ ನಡೆಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಡಯಟ್ ಪ್ರಾಂಶುಪಾಲ ಹೆಚ್.ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಸೇರಿದಂತೆ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!