Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಟರಿ ಕ್ಲಬ್ ಚಿನ್ಮೂಲಾದ್ರಿ ನಿಸ್ವಾರ್ಥವಾಗಿ ಸಮಾಜದ ಸೇವೆ ಮಾಡುತ್ತಿದೆ : ಮಾಣಿಕ್ಯ ಪವಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 20 :
ರೋಟರಿ ಕ್ಲಬ್ ಚಿನ್ಮೂಲಾದ್ರಿ ಇದೊಂದು ಸೇವಾ ಮನೋಭವನೆಯ ಸಂಘಟನೆಯಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜನಸೇವೆಯನ್ನು ಮಾಡಬೇಕಿದೆ ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಜಿಲ್ಲಾ ಗವರ್ನರ್ ಮಾಣಿಕ್ಯ ಪವಾರ್ ಕ್ಲಬ್‍ನ ಪದಾಧಿಕಾರಿಗಳಿಗೆ ಕರೆ ನೀಡಿದರು.

ನಗರದ ಎಸ್.ಬಿ.ಆರ್.ಎಂ ರೋಟರಿ ಬಾಲಭವನದಲ್ಲಿ ಭಾನುವಾರ ಸಂಜೆ ರೋಟರಿ ಕ್ಲಬ್ ಚಿನ್ಮೂಲಾದ್ರಿಗೆ ಭೇಟಿ ನೀಡಿದ್ದ ಜಿಲ್ಲಾ ಗೌರ್ನರ್ ರವರ ಸಂಬಂಧ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಲಬ್ ಜನೋಪಯೋಗಿಯಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ. ಜನರಿಗೆ ಅಗತ್ಯವಾದ ಆರೋಗ್ಯ ತಪಾಸಣಾ ಶಿಬಿರ, ಶಿಕ್ಷಣದ ಬಗ್ಗೆ ಮಾಹಿತಿ, ರಕ್ತದಾನ ಶಿಬಿರ, ಸೇರಿದಂತೆ ಕ್ಲಬ್‍ನಿಂದ ದೂರೆಯಬಹುದಾದ ಇತರೆ ಮಾಹಿತಿಯನ್ನು ನೀಡುವುದರ ಮೂಲಕ ಅವರನ್ನು ಕ್ಲಬ್‍ನ ಸದಸ್ಯರನ್ನಾಗಿ ಮಾಡಬೇಕಿದೆ. ಇದರಿಂದಾಗಿ ನಾಯಕತ್ವ ಬೆಳೆಯುತ್ತದೆ ಎಂದರು.

ಕ್ಲಬ್‍ವತಿಯಿಂದ ಮಾಡಿದಂತಹ ಕಾರ್ಯಕ್ರಮಗಳ ಮಾಹಿತಿಯನ್ನು ಕ್ಲಬ್‍ನ ಕೇಂದ್ರ ಕಛೇರಿಗೆ ಕಳುಹಿಸುವುದನ್ನು ಮರೆಯಬಾರದು. ರೋಟರಿ ಕ್ಲಬ್ ಚಿನ್ಮೂಲಾದ್ರಿ ಏನು ಮಾಡುತ್ತಿದೆ ಎಂಬುದನ್ನು ಜನತೆ ತಿಳಿಯಬೇಕಿದೆ ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ಮತ್ತು ಸಹಾಯವನ್ನು ಕ್ಲಬ್‍ನವರು ಮಾಡಬೇಕಿದೆ ಇಂದಿನ ಸಮಾಜಿಕ ಜಾಲ ತಾಣಗಳನ್ನು ಉಪಯೋಗ ಮಾಡಿಕೊಂಡು ಪ್ರಚಾರ ಮಾಡಬೇಕಿದೆ ಎಂದ ಅವರು, ಈ ಸಂಸ್ಥೆ ನಿಸ್ವಾರ್ಥವಾಗಿ ಸಮಾಜದ ವಿವಿಧ ರೀತಿಯ ಕೆಲಸವನ್ನು ಮಾಡುತ್ತಿದೆ. ಬಡವರಿಎಗ ತಮ್ಮ ಕೈಲಾದ ಸಹಾಯವನ್ನು ಸಹಾ ಮಾಡಬೇಕಿದೆ ಎಂದು ಮಾಣಿಕ್ಯ ಪವಾರ್ ಕರೆ ನೀಡಿದರು.

ಅಸಿಸ್ಟೆಂಟ್ ಗೌರ್ನರ್ ಆದ ಉಮೇಶ್ ತುಪ್ಪದ್ ಮಾತನಾಡಿ, ಕ್ಲಬ್ ಗಳಿಗೆ ಜಿಲ್ಲಾ ಗೌರ್ನರ್ ಬೇಟಿ ಮಾಡುವುದು ಅಲ್ಲಿನ ಕಾಗದ ಪತ್ರ ಮತ್ತು ಮಾಡಿದಂತಹ ಕಾರ್ಯಕ್ರಮಗಳ ವರದಿಯನ್ನು ನೋಡುವುದು ಸಾಮಾನ್ಯವಾದ ಕೆಲಸವಾಗಿದೆ. ಈ ಹಿನ್ನಲೆಯಲ್ಲಿ ಕ್ಲಬ್‍ನ ಪದಾಧಿಕಾರಿಗಳು ತಾವು ಮಾಡಿದ ಕೆಲಸದ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಸಂಗ್ರಹ ಮಾಡಿಕೊಂಡಿರಬೇಕು. ಈ ವಿಷಯದ ಬಗ್ಗೆ ಚರ್ಚೆಯಾಗಬೇಕಿದೆ.

ಆರೋಗ್ಯ ಶಿಕ್ಷಣ ಸಮಾಜಿಕ ಕಳಕಳಿಯ ಬಗ್ಗೆ ಹೆಚ್ಚಿನ ಒತ್ತನ್ನು ನೀಡಬೇಕಿದೆ. ಕಾರ್ಯಕ್ರಮ ಮಾಡುವುದು ಒಂದು ಕೆಲಸವಾದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷರಾದ ಶಂಕರಪ್ಪ ಕಾರ್ಯದರ್ಶಿ ಲಕ್ಷ್ಮೀಕಾಂತ್ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment