Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರೋಟರಿ ಕ್ಲಬ್ ಚಿನ್ಮುಲಾದ್ರಿ ವತಿಯಿಂದ ಶಿಕ್ಷಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ರೋಟರಿ ಬಾಲಭವನದಲ್ಲಿ ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷರಾದ ರೊ.ದಿಲ್‍ಶಾದ್ ಉನ್ನಿಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ ರವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕ ವೃತ್ತಿಯಿಂದ ದೇಶದ ಸರ್ವೋನ್ನತ ರಾಷ್ಟ್ರಪತಿ ಹುದ್ದೆಯನ್ನೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್‍ಗಟ್ಟಿ ಸಮಾರಂಭ ಉದ್ಗಾಟಿಸಿ ಮಾತನಾಡುತ್ತ ರೋಟರಿ ಕ್ಲಬ್ ಚಿನ್ಮೂಲಾದ್ರಿ ಶಿಕ್ಷಕರ ದಿನಾಚರಣೆ ಆಚರಿಸುವ ಮೂಲಕ ಶಿಕ್ಷಕರುಗಳನ್ನು ಸನ್ಮಾನಿಸಿ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಗುರುಗಳನ್ನು ಗೌರವಿಸಿದಂತಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನವನ್ನು ಪ್ರತಿ ವರ್ಷವೂ ಸೆ. 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಹೇಳಿದರು.

ಸೈಯದ್ ಸ್ವಾಲೇಹ, ಅಡ್ವೆಂಚರ್ ಸ್ಪೋಟ್ರ್ಸ್ ತರಬೇತುದಾರ ನ್ಯಾಯವಾದಿ ಬಿ.ಟಿ.ಬಸವರಾಜು, ಶಿಕ್ಷಕಿ ನಸೀಮ್ ಉನ್ನಿಸಾ, ದೈಹಿಕ ಶಿಕ್ಷಕ ಬೋರನಾಯ್ಕ ಇವರುಗಳನ್ನು ಸನ್ಮಾನಿಸಲಾಯಿತು.  ರೋಟರಿ ಕ್ಲಬ್ ಚಿನ್ಮೂಲಾದ್ರಿ ಉಪಾಧ್ಯಕ್ಷ ರೊ.ಗುರುಮೂರ್ತಿ ಎಸ್.ವಿ. ಕಾರ್ಯದರ್ಶಿ ಅಮೃತ ಸಂತೋಷ್ ಇವರುಗಳು ವೇದಿಕೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...