ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ: ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ರೋಟರಿ ಕ್ಲಬ್ ಹಿಂದಿನಿಂದಲೂ ಜನಮುಖಿ ಕಾರ್ಯಗಳನ್ನು ಮಾಡುತ್ತ ಬರುತ್ತಿದೆ ಎಂದು ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಎಸ್.ಎನ್.ಪತ್ತಾರ್ ಶ್ಲಾಘಿಸಿದರು.
ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ, ಪ್ರಜಾಸೇವಾ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ, ರೋಟರಿ ಕ್ಲಬ್ ಚಿನ್ಮುಲಾದ್ರಿ ವತಿಯಿಂದ ರೋಟರಿ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಸೇವೆಯ ಮೂಲಕ ರೋಟರಿ ಕ್ಲಬ್ ಅನೇಕ ಜನೋಪಯೋಗಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಸ್ವಾರ್ಥಕ್ಕೆ ಬದುಕುವ ಬದಲು ಸಮಾಜಕ್ಕೆ ಕೈಲಾದ ಕೊಡುಗೆ ನೀಡುವುದರಿಂದ ಜೀವನ ಸಾರ್ಥಕವಾಗುತ್ತದೆ ಎಂದರು.
ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ರೊ.ಈ.ಅರುಣ್‍ಕುಮಾರ್ ಮಾತನಾಡಿ ಮೊಬೈಲ್ ಮತ್ತು ಟಿವಿ ಮಾಧ್ಯಮಗಳಿಂದ ಜಾನಪದ ನಶಿಸುತ್ತಿದೆ. ಗ್ರಾಮೀಣ ಪ್ರದೇಶಗಳಿಂದ ಹುಟ್ಟಿಕೊಂಡಿರುವ ಜಾನಪದವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಚಿನ್ಮುಲಾದ್ರಿ ಕಾರ್ಯದರ್ಶಿ ಶ್ರೀನಿವಾಸ್ ಮಳಲಿ, ಅಸಿಸ್ಟೆಂಟ್ ಗೌರ್ವನರ್ ಗಾಯತ್ರಿ ಶಿವರಾಂ, ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಮಜಹರ್‍ಉಲ್ಲಾ, ಪ್ರಜಾಸೇವಾ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷೆ ಶ್ರೀಮತಿ ಓಂಕಾರಮ್ಮ, ರೋಟರಿ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಕೆ.ಪಿ.ಎಂ.ಗಣೇಶಯ್ಯ, ಎಂ.ಕೆ.ಹರೀಶ್ ಇವರುಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.