Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿ ಕ್ಲಬ್ ಇರುವುದು ಜನರ ಅನುಕೂಲಕ್ಕಾಗಿ :  ಹನುಮಲಿ ಷಣ್ಮುಖಪ್ಪ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.05) : ರೋಟರಿ ಕ್ಲಬ್ ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಇರುವುದು ಜನರ ಅನುಕೂಲಕ್ಕಾಗಿ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ, ಜಾಗೃತಿ ನೀಡುವ ನಿಟ್ಟಿನಲ್ಲಿ ಅವರ ಸೇವೆ ಶ್ಲಾಘನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹನುಮಲಿ ಷಣ್ಮುಖಪ್ಪ ತಿಳಿಸಿದರು.

ನಗರದ ಮೆದೇಹಳ್ಳಿ ರಸ್ತೆಯ ಶ್ರೀ ತರಳಬಾಳು ಶಿವಾಚಾರ್ಯ ಬಡಾವಣೆಯಲ್ಲಿ ಮಂಗಳವಾರ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿಂದ ಆಯೋಜಿಸಿದ್ದ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಭೆಯಲ್ಲಿ ಮಾತನಾಡಿದರು.

ರೋಟರಿ ಸಹ ಕೋವಿಡ್ ಸಂಕಷ್ಟದಲ್ಲಿ ಸಾಕಷ್ಟು ಕೆಲಸ ಮಾಡಿದೆ. ರೋಟರಿ ಸಾಮಾಜಿಕ ಸೇವೆಯನ್ನು ಉಸಿರಾಗಿಸಿಕೊಂಡಿದ್ದಾರೆ. ಕೋವಿಡ್ ಮೂರನೇ ಅಲೆ ಸಂಭಾವ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳುತ್ತಿದ್ದಾರೆ. ಇಂತಹ ಸಮಯದಲ್ಲಿ ರೋಟರಿ ಅಧ್ಯಕ್ಷರಾದ ಶಿವಕುಮಾರ್ ಹಾಗೂ ಜೋಷಿ ಅವರು ವೈಜ್ಞಾನಿಕವಾಗಿ ಧೃಡಿಕರಿಸಿದ ಆಂಧ್ರಪ್ರದೇಶದ ಆನಂದಯ್ಯ ಅವರ ಕರೋನ  ಆರ್ಯವೇದ ಔಷಧಿಯನ್ನು ನೀಡಿದ್ದಾರೆ. ಕೋವಿಡ್ ಬಂದರೆ ಅದನ್ನು ತಡೆಯುವ ಶಕ್ತಿ ಈ ಔಷಧಕ್ಕಿದೆ. ಎರಡು ಬಾರಿ ತೆಗೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಮತ್ತು ಕೋವಿಡ್ ನಿಯಂತ್ರಣ ಮಾಡುವಲ್ಲಿ ಸರ್ಕಾರಗಳು ಯಶಸ್ವಿಯಾಗಿವೆ ಎಂದರು.

ಈ ಬಡಾವಣೆ ಆಗಿ ಹತ್ತು ವರ್ಷವಾಗಿದೆ. ಆದರೆ ನಿರ್ವಹಣೆಯ ತೊಂದರೆಯಿದೆ. ಒಂದು ಸಮಿತಿ ಮಾಡಿ ಅದರ ನಿರ್ವಹಣೆ ಜವಬ್ದಾರಿ ನೀಡಲಾಗುತ್ತದೆ. ಅದಕ್ಕೊಬ್ಬ ಸಾರಥಿಯನ್ನು ನೇಮಕ ಮಾಡಬೇಕು. ಮನೆ ಕಟ್ಟಿದವರಿ ಗೆ, ಸೈಟ್ ಇದ್ದವರಿಗೂ ಅದರ ಶುಲ್ಕ ವಿಧಿಸಲಾಗುತ್ತದೆ. ಜನರಿಂದ ಜನರಿಗಾಗಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿಯೇ ಮುಖ್ಯ‌. ಗ್ರಂಥಾಲಯ, ಕಚೇರಿ, ವಾಯು ವಿಹಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಡಾವಣೆಯ ನಿವಾಸಿಗಳ ಅಭಿಪ್ರಾಯದಂತೆ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಸರ್ವ ಸದಸ್ಯರ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷರಾದ ಸಿ.ಎಸ್. ಶಿವಕುಮಾರ್, ಕಾರ್ಯದರ್ಶಿ ಪ್ರತೀಕ್ ಜೋಷಿ, ಮಹಡಿ ಶಿವಮೂರ್ತಿ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!