ಮಂಗಳೂರು; ಸದ್ಯ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪಕ ಅಧ್ಯಕ್ಷರನ್ನ ನೇಮಕ ಮಾಡಿರುವುದೇ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ ಈಗ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಹರೀಶ್ ಇಂಜಾಡಿ ಈ ಮೊದಲು ರೌಡಿಶೀಟರ್ ಆಗಿದ್ದವರು. ಹೀಗಾಗಿ ಎಲ್ಲೆಡೆ ಭಾರೀ ವಿರೋಧ ವ್ಯಕ್ಯವಾಗಿದೆ.
ರಾಜ್ಯ ಸರ್ಕಾರವೇ ಈ ರೌಡಿಶೀಟರ್ ಅನ್ನು ನೇಮಕ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಈ ಆರೋಪ ಮಾಡಿದ್ದು, ಸಚಿವರಾದ ದಿನೇಶ್ ಗುಂಡೂರಾವ್ ಅವರ ಶಿಫಾರಸ್ಸಿನ ಮೇರೆಗೆ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಅವರನ್ನ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆರೋಪ ಮಾಡಿದ್ದಾರೆ. ಹರೀಶ್ ಇಂಜಾಡಿಯನ್ನ ಕಾಂಗ್ರೆಸ್ ಸರ್ಕಾರವೇ ನೇಮಕ ಮಾಡಿದೆ ಎಂದು ಆರೋಪ ಮಾಡಿದೆ. ಈ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ಇದೀಗ ತಿರುಗೇಟು ನೀಡಿದೆ.
ಕುಕ್ಕೆ ಶ್ರೀಸುಬ್ರಮಣ್ಯ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರು ಯಾರಾಗಬೇಕು ಎನ್ನುವುದು ಅಲ್ಲಿನ ಸದಸ್ಯರ ಆಯ್ಕೆಗೆ ಬಿಟ್ಟಿದ್ದು. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಹೇಗೆ ಸಾಧ್ಯ..? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಕೇಳಿದೆ. ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ. ಇಂಥದಗದೊಂದು ಸಾಮಾನ್ಯ ಜ್ಞಾನ ಇಲ್ಲದ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿಕೊಂಡು ಜನರ ದಾರು ತಪ್ಪಿಸಲಯ ಹೊರಟಿದೆ ಎಂದು ದೂರಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ಇಂಥವರಿಗೆ ಬೆನ್ನೆಲುಬಾಗಿ ನಿಂತು ಪೋಷಿಸಿ, ಬೆಳೆಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಇವರು ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಚುನಾವಣೆ ಮೂಲಕ ಆಯ್ಕೆಯಾದ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಗೂಬೆ ಕೂರೊಸಲು ಹೊರಟಿರುವುದು ವಿಪರ್ಯಾಸ ಎಂದಿದೆ.
