ಬೆಂಗಳೂರು: ಹಲಸೂರಿನ ಬಳಿ ನಡೆದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲಸೂರು ಕೆರೆ ಬಳಿಯ ವಾರ್ ಮೆಮೋರಿಯಲ್ ಸರ್ಕಲ್ ನಲ್ಲಿ ರೌಡಿಶೀಟರ್ ಹತ್ಯೆ ಮಾಡಲಾಗಿದೆ. ಬಿಕ್ಲು ಶಿವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವನನ್ನ ಅವನ ಮನೆಯ ಮುಂದೆಯೇ ಕೊ* ಮಾಡಿದ್ದಾರೆ. ನಾಲ್ಕೈದು ಜನಗಳು ಬಂದು ಬರ್ಬರವಾಗಿ ಕೊಂದಿದ್ದಾರೆ. ರೌಡಿಶೀಟರ್ ಬಿಕ್ಲ ಶಿವನ ಕೊಲೆ ಮಾಡುವುದಕ್ಕೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಮೇಲ್ನೋಟಕ್ಕೆ ಹಳೇ ವೈಷಮ್ಯದಿಂದ ಹಿನ್ನೆಲೆ ಕೊ* ಮಾಡಲಾಗಿದೆ ಎನ್ನಲಾಗ್ತಾ ಇದೆ. ನಿನ್ನೆ ರತ್ರಿ 8.30ರ ಸುಮಾರಿಗೆ ಈ ಕೊಲೆ ನಡೆದಿದೆ. ಮಗನ ಜೀವ ತೆಗೆಯುವುದಕ್ಕೆ ಶಾಸಕ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಮಗನ ಕೊಲೆ ಮಾಡಲಾಗಿದೆ ಅಂತ ರೌಡಿಶೀಟರ್ ಶಿವನ ತಾಯಿ ಆರೋಪ ಮಾಡಿದ್ದಾತೆ. ಈ ದೂರಿನ ಆಧಾರದ ಮೇಲೆ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಾಖಲಾದ ಎಫ್ಐಆರ್ ನಲ್ಲಿ ಶಾಸಕ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿ ಎಂದು ಉಲ್ಲೇಖ ಮಾಡಲಾಗಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್, ವಿಮಲ್, ಕಿರಣ್, ಅನಿಲ್ ಹಾಗೂ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ಕೂಡ ತನಿಖೆಯನ್ನ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















