ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಮಂಗಳೂರಿನ ನಟೋರಿಯಸ್ ರೌಡಿಶೀಟರ್ ಅನ್ನು ಪೋಲಿಸರು ಸೆರೆ ಹಿಡಿದಿದ್ದಾರೆ. ರೌಡಿಶೀಟರ್ ಸಫ್ವಾನ್ ಹುಸೈನ್ (42) ನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಈತ ತನ್ನ ಹೆಸರನ್ನು ಉಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿಕೊಂಡಿದ್ದ.ಬದಲಾದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 2018 ರಲ್ಲಿ ವಿದೇಶಕ್ಕೆ (ದುಬೈ) ಪರಾರಿಯಾಗಿದ್ದ.ಸುಮಾರು 9 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಈತ, ಇತ್ತೀಚೆಗೆ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಿದೇಶದಿಂದ ಗುಟ್ಟಾಗಿ ಭಾರತಕ್ಕೆ ವಾಪಸ್ ಆಗಿದ್ದ.
ಬಂಧಿತ ಸಫ್ವಾನ್ ಹುಸೈನ್ ಮೇಲೆ ಮಂಗಳೂರು ಸೇರಿದಂತೆ ವಿವಿಧೆಡೆ ಒಟ್ಟು 31 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.ಬಂಧಿತ ರೌಡಿಯಿಂದ ಪೊಲೀಸರು ನಕಲಿ ಆಧಾರ್ ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಇದೇ ನಕಲಿ ಗುರುತಿನ ಚೀಟಿಯನ್ನು ಬಳಸಿಕೊಂಡು ಆತ ಆಂಧ್ರಪ್ರದೇಶದಲ್ಲಿ ಯಾರಿಗೂ ಸಂಶಯ ಬರದಂತೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









