Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ರೂ.2000 ಕೋಟಿ ಅನುದಾನ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

ಮೊಳಕಾಲ್ಮೂರು, (ಆ.10) ತಾಲೂಕಿನ ಅಭಿವೃದ್ಧಿಗೆ ರೂ. 2000 ಕೋಟಿಗಳ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಜನರ ಒಳಿತಿಗಾಗಿ. ಜನರನ್ನು ಸೇರಿಸಿ ಉತ್ಸವ ಮಾಡುವುದು ಸರ್ಕಾರದ ಕೆಲಸವಲ್ಲ. ಉತ್ತಮ ಆಡಳಿತವೇ ಸರ್ಕಾರದ ಜನೋತ್ಸವ ಕಾರ್ಯಕ್ರಮವಾಗಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು‌.

ಮೊಳಕಾಲ್ಮೂರು ಪಟ್ಟಣದಲ್ಲಿ ಬುಧವಾರ ನೂತನ ತಾಲೂಕು ಆಡಳಿತ ಸೌಧದ ಲೋಕಾರ್ಪಣೆ ಹಾಗೂ ರೂ.70 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೂ.11 ಕೋಟಿ ವೆಚ್ಚದಲ್ಲಿ ನೂತನ ತಾಲೂಕು ಆಡಳಿತ ಸೌಧ, ರೂ.1.30 ಕೋಟಿ ವೆಚ್ಚದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರೂ.35 ಲಕ್ಷ ವೆಚ್ಚದ ಪಶು ಸಂಗೋಪನೆ ಆಸ್ಪತ್ರೆ, ರೂ.1.36ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಕೊತ್ತಲಗುಂದ ಕೆರೆಯಿಂದ ಮೊಳಕಾಲ್ಮೂರು ನಗರಕ್ಕೆ ಕುಡಿಯುವ ನೀರು ಸರಬರಾಜು, ಮೊಳಕಾಲ್ಮೂರು ನಗರದ ಮಾರುತಿ ನಗರದ ಓವರ್ ಹೆಡ್ ಟ್ಯಾಂಕರ್ ನಿರ್ಮಾಣ, ಶಾಸಕರ ಅನುದಾನದಲ್ಲಿ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಭಾಗದ ಕುಡಿಯುವ ನೀರು ಸಮಸ್ಯೆ ಕೊನೆಗಾಣಿಸುವ ರೂ‌.614 ಕೋಟಿ ವೆಚ್ಚದ ತುಂಗಭದ್ರಾ ಹಿನ್ನೀರಿನ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜಲಜೀವನ್ ಮಿಷನ್ ಅಡಿ ರೂ. 52 ಕೋಟಿ ವೆಚ್ಚದಲ್ಲಿ 128 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರೂ.30 ಕೋಟಿ ವೆಚ್ಚದಲ್ಲಿ ಬೀದರ್ ಹಾಗೂ ಶ್ರೀರಂಗಪಟ್ಟಣ ಹೆದ್ದಾರಿ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ 70 ಮಹಿಳಾ ಸಂಘಗಳಿಗೆ ರೂ.1 ಲಕ್ಷಗಳ ಬೀಜಧನದ ಚಕ್, ಸ್ಮಾಶನಕ್ಕಾಗಿ ಜಾಗ ನೀಡಿದವರಿಗೆ ಪರಿಹಾರ ಧನದ ಚಕ್, ಸಂಧ್ಯಾ ಸುರಕ್ಷಾ ಹಾಗೂ ವಿಕಲಚೇತನ ಮಾಸಾಶನದ ಆದೇಶ ಹಾಗೂ ರೈತರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ .ಎಸ್.ಮನ್ನಿಕೇರಿ, ಪಟ್ಟಣ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಸುಭಾ ಪೃಥ್ವಿರಾಜ್, ರಾಜ್ಯ ಅನುಸೂಚಿತ ಜಾತಿ, ಪಂಗಡಗಳ ಆಯೋಗದ ಸದಸ್ಯ ಜಯಪಾಲ, ಉಪ ವಿಭಾಗಧಿಕಾರಿ ಆರ್.ಚಂದ್ರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪಿಳ್ಳೇಕೆರೆನಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸಿ : ಶಾಸಕ ವೀರೇಂದ್ರ ಸೂಚನೆ

  ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23 : ಪಿಳ್ಳೇಕೆರೆನಹಳ್ಳಿ ಗ್ರಾಮದ ಬಳಿ ಸ್ಕೈವಾಕರ್ ನಿರ್ಮಿಸುವ ಬದಲಾಗಿ ಅಂಡರ್ ಪಾಸ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸೂಚಿಸಿದ್ದಾರೆ.

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಡಿಸೆಂಬರ್ 23 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 23 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ

ಚಿತ್ರದುರ್ಗ | ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನೆರವೇರಿದ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಡಿ. 23 : ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ

error: Content is protected !!