Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಾವಗಡ – ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ರೂ.265.00 ಕೋಟಿ : ಸಂಸದ ಗೋವಿಂದ ಕಾರಜೋಳ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 :  ತುಮಕೂರು – ರಾಯದುರ್ಗ ನೂತನ ರೈಲುಮಾರ್ಗ ಈ ಭಾಗದ ಅತ್ಯಂತ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಭಾಗವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾವಗಡದಿಂದ ಮಡಕಶಿರಾ ನಡುವಿನ 22 ಕಿ.ಮೀ ಉದ್ದದ ಹೊಸ ಬ್ರಾಡ್‍ಗೇಜ್ ರೈಲುಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರೂ.265.92 ಕೋಟಿ ಅನುದಾನ ಒದಗಿಸುವ ಮೂಲಕ ತುಮಕೂರು-ರಾಯದುರ್ಗ ಹೊಸ ಬ್ರಾಡ್‍ಗೇಜ್ ರೈಲು ಮಾರ್ಗಕ್ಕೆ ವೇಗ ನೀಡಿದೆ.

ಈಗಾಗಲೇ ಈ ಬಗ್ಗೆ ನೈರುತ್ಯ ರೈಲ್ವೆ ವಲಯದಿಂದ ಟೆಂಡರ್ ಕರೆಯಲಾಗಿದೆ,   ದಿನಾಂಕ: 11.09.2024 ರಂದು ಈ ಕಾಮಗಾರಿಯ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ. ಒಟ್ಟಾರೆಯಾಗಿ ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಈ ಯೋಜನೆಯಡಿ ಪಾವಗಡ ಮತ್ತು ಮಡಕಶಿರಾ ನಗರಗಳಲ್ಲಿ 510 ಚದುರ ಮೀಟರ್ ವಿಸ್ತೀರ್ಣದ ಸುಸಜ್ಜಿತ ರೈಲ್ವೆ ನಿಲ್ದಾಣಗಳು ನಿರ್ಮಾಣವಾಗಲಿವೆ, ಹಾಗೂ ಈ ಮಾರ್ಗದಲ್ಲಿ ತಡೆರಹಿತ ರೈಲು ಸಂಚಾರಕ್ಕೆ 3 ಪ್ರಮುಖ ಸೇತುವೆಗಳು, 32 ಸಣ್ಣ ಸೇತುವೆಗಳು, 21 RUB (Riad under bridge) ಗಳು  ಹಾಗೂ 4 ROB (Road over bridge) ಗಳು ನಿರ್ಮಾಣವಾಗಲಿವೆ.

ಒಟ್ಟಾರೆಯಾಗಿ ಯಾವುದೇ ಅಡೆತಡೆಯಿಲ್ಲದೇ ರೈಲುಗಳು ಪ್ರತಿಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸಲು ಯಾವ ಅಗತ್ಯ ಮೂಲಸೌಕರ್ಯಗಳು ಬೇಕೋ ಆ ಎಲ್ಲವನ್ನೂ ಈ ಯೋಜನೆ ಒಳಗೊಂಡಿದೆ. ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಪೂರ್ಣಗೊಂಡರೆ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...