ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ತುಮಕೂರು – ರಾಯದುರ್ಗ ನೂತನ ರೈಲುಮಾರ್ಗ ಈ ಭಾಗದ ಅತ್ಯಂತ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಭಾಗವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾವಗಡದಿಂದ ಮಡಕಶಿರಾ ನಡುವಿನ 22 ಕಿ.ಮೀ ಉದ್ದದ ಹೊಸ ಬ್ರಾಡ್‍ಗೇಜ್ ರೈಲುಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರೂ.265.92 ಕೋಟಿ ಅನುದಾನ ಒದಗಿಸುವ ಮೂಲಕ ತುಮಕೂರು-ರಾಯದುರ್ಗ ಹೊಸ ಬ್ರಾಡ್‍ಗೇಜ್ ರೈಲು ಮಾರ್ಗಕ್ಕೆ ವೇಗ ನೀಡಿದೆ.
ಈಗಾಗಲೇ ಈ ಬಗ್ಗೆ ನೈರುತ್ಯ ರೈಲ್ವೆ ವಲಯದಿಂದ ಟೆಂಡರ್ ಕರೆಯಲಾಗಿದೆ, ದಿನಾಂಕ: 11.09.2024 ರಂದು ಈ ಕಾಮಗಾರಿಯ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ. ಒಟ್ಟಾರೆಯಾಗಿ ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.
ಈ ಯೋಜನೆಯಡಿ ಪಾವಗಡ ಮತ್ತು ಮಡಕಶಿರಾ ನಗರಗಳಲ್ಲಿ 510 ಚದುರ ಮೀಟರ್ ವಿಸ್ತೀರ್ಣದ ಸುಸಜ್ಜಿತ ರೈಲ್ವೆ ನಿಲ್ದಾಣಗಳು ನಿರ್ಮಾಣವಾಗಲಿವೆ, ಹಾಗೂ ಈ ಮಾರ್ಗದಲ್ಲಿ ತಡೆರಹಿತ ರೈಲು ಸಂಚಾರಕ್ಕೆ 3 ಪ್ರಮುಖ ಸೇತುವೆಗಳು, 32 ಸಣ್ಣ ಸೇತುವೆಗಳು, 21 RUB (Riad under bridge) ಗಳು ಹಾಗೂ 4 ROB (Road over bridge) ಗಳು ನಿರ್ಮಾಣವಾಗಲಿವೆ.
ಒಟ್ಟಾರೆಯಾಗಿ ಯಾವುದೇ ಅಡೆತಡೆಯಿಲ್ಲದೇ ರೈಲುಗಳು ಪ್ರತಿಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸಲು ಯಾವ ಅಗತ್ಯ ಮೂಲಸೌಕರ್ಯಗಳು ಬೇಕೋ ಆ ಎಲ್ಲವನ್ನೂ ಈ ಯೋಜನೆ ಒಳಗೊಂಡಿದೆ. ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಪೂರ್ಣಗೊಂಡರೆ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











