ಮಂಗಳೂರು: RSS ಮುಖಂಎ ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಭಾಕರ್ ಅವರು ಎಂದಿನಂತೆ ತಮ್ಮ ಕಲ್ಲಡ್ಕ ವಿದ್ಯಾಸಂಸ್ಥೆಗೆ ಹೋಗಿದ್ದಾರೆ. ಆ ವೇಳೆ ಕಲ್ಲಡ್ಕ ಪ್ರಭಾಕರ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚಿಕಿತ್ಸೆಗೆ ಸ್ಪಂದಿಸಿರುವ ಪ್ರಭಾಕರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.