ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ದಿಢೀರನೇ ಬೆಂಗಳೂರಿಗೆ ಶಿಫ್ಟ್ ಮಾಡಿದ್ದು ಆತಂಕಕ್ಕೆ ಕಾರಣವಾಗಿದೆ. ರುದ್ರಪ್ಪ ಲಮಾಣಿ ಅವರಿಗೆ ಏನಾಗಿದೆ ಎಂಬ ಚಿಂತೆ ಅವರ ಬೆಂಬಲುಗರನ್ನು ಕಾಡುತ್ತಿದೆ.

ಯಾಕಂದ್ರೆ ಅವರಿಗೆ ಅಪಘಾತವಾದಾಗ ಅವರ ಹಣೆ, ಹಲ್ಲು, ಗದ್ದ ಹಾಗೂ ಬಲ ಮೊಣಕಾಲಿಗೆ ಗಾಯವಾಗಿತ್ತು. ಅದಕ್ಕಾಗಿ ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆರೋಗ್ಯವಾಗಿದ್ದಾರೆ ಎನ್ನಲಾಗಿತ್ತು. ಈಗ ನೋಡಿದರೆ ದಿಢೀರನೆ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯದ ಬಗ್ಗೆ ರುದ್ರಪ್ಪ ಲಮಾಣಿ ಅವರ ಕುಟುಂಬಸ್ಥರಾಗಲಿ, ವೈದ್ಯರಾಗಲೀ ಯಾವುದೇ ಗುಟ್ಟು ಬಿಟ್ಟು ಕೊಡುತ್ತಿಲ್ಲ. ನಿನ್ನೆ ರಾತ್ರಿಯವರೆಗೂ ಸಣ್ಣ ಪುಟ್ಟ ಗಾಯಗಳಾಗಿದಾವೆ ಎಂಬುದಷ್ಟೇ ಹೇಳಲಾಗುತ್ತಿತ್ತು. ಹಾಗೇ ಚಿಕಿತ್ಸೆ ನೀಡಿದ್ದಾರೆ, ಆರೋಗ್ಯವಾಗಿದ್ದಾರೆ ಎನ್ನಲಾಗಿತ್ತು. ಆದರೆ ಈಗ ದಿಢೀರನೆ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ನಿನ್ನೆ ಅವರು ಅಧಿವೇಶನ ಮುಗಿಸಿಕೊಂಡು ಹಾವೇರಿಗೆ ಬರುತ್ತಿದ್ದಂತ ವೇಳೆ, ಎಳಬೀರು ಕುಡಿಯಲೆಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಬಳಿ ಕಾರು ನಿಲ್ಲಿಸಿದ್ದಾರೆ. ಕಾರಿನಿಂದ ಇಳಿಯುವಾಗ ವೇಗದಿಂದ ಬಂದ ಬೈಕ್ ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದೆ. ಇದರ ಪರಿಣಾಮ ರುದ್ರಪ್ಪ ಲಮಾಣಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯನ್ನು ನೀಡಲಾಗಿತ್ತು. ಈಗ ಬೆಂಗಳೂರಿಗೆ ಶಿಫ್ಟ್ ಮಾಡಿ, ಚಿಕಿತ್ಸೆ ಮುಂದುವರೆಸಿದ್ದಾರೆ.

