Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರುಡ್‌ಸೆಟ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಸೆ. 06 : ರುಡ್‌ಸೆಟ್ ಸಂಸ್ಥೆ ವತಿಯಿಂದ 30 ದಿನಗಳ ಗ್ರಾಮೀಣ ಕಟ್ಟಡ ಕುಶಲಕರ್ಮಿ (ಗಾರೆ) ಹಾಗೂ ಕಾಂಕ್ರಿಟ್ ಕೆಲಸಗಾರರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸೆ.17 ರಿಂದ ಅಕ್ಟೋಬರ್ 10 ವರೆಗೆ ತರಬೇತಿ ನಡೆಯಲಿದೆ. ತರಬೇತಿ ಉಚಿತವಾಗಿದ್ದು, ಊಟ ಮತ್ತು ವಸತಿ ಸೌಲಭ್ಯ ಲಭ್ಯವಿರುತ್ತದೆ. 19 ರಿಂದ 45 ವರ್ಷದ ಒಳಗಿನ, ಕನ್ನಡ ಭಾಷೆ ಜ್ಞಾನವುಳ್ಳ ಹಾಗೂ ಈಗಾಗಲೇ ಗಾರೆ ಹಾಗೂ ಕಾಂಟ್ರಿಕ್ ಕೆಲಸದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಆದ್ಯತೆ ನೀಡಲಾಗುವುದು.

ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಮೊಬೈಲ್ ನಂಬರ್‌ವುಳ್ಳ ಸ್ವ ವಿಳಾಸ ಅರ್ಜಿಯೊಂದಿಗೆ ಆಧಾರ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜರಾಕ್ಸ್ ಪ್ರತಿಗಳೊಂದಿಗೆ ಸೆ.15 ರಂದು ಚಿತ್ರದುರ್ಗ ಕೆಳಗೋಟೆ ಬ್ಯಾಂಕ್ ಕಾಲೋನಿಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 8618282445, 9481778047, 9019299901, ಅಥವಾ 8660627785 ಗೆ ಕರೆ ಮಾಡಬಹುದು ಎಂದು ರುಡ್‌ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...