ಸುದ್ದಿಒನ್, ಚಿತ್ರದುರ್ಗ, ಜೂನ್. 09 : ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆಯಾದ ರುಡ್ ಸೆಟ್ ಸಂಸ್ಥೆ, ಮೈಸೂರು ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸಂಪೂರ್ಣ ಉಚಿತ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ಆಯೋಜಿಸಲಾಗಿದೆ.
ಈ ಸಂಸ್ಥೆಯ ಪ್ರಸಕ್ತ ತರಬೇತಿ ಕಾರ್ಯಕ್ರಮಕ್ಕೆ NRLM ಜಿಲ್ಲಾ ಪಂಚಾಯತ್, ಮೈಸೂರು ಪ್ರಾಯೋಜಕತ್ವ ನೀಡಿದೆ.
ತರಬೇತಿಯ ಪ್ರಮುಖ ವಿವರಗಳು ತರಬೇತಿ ದಿನಾಂಕ: 24.06.2026 ರಿಂದ 31.07.2026 ರ ವರೆಗೆ
ಸೌಲಭ್ಯಗಳು: ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ತರಬೇತಿಗೆ ಸೇರಲು ಬೇಕಾದ ಅರ್ಹತೆಗಳು:
ವಯೋಮಿತಿ: ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು.
ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೀಡಲಾಗಿರುವ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ತರಬೇತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ) ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಕಚೇರಿ ದೂರವಾಣಿ ಸಂಖ್ಯೆ: 0821-2519663
ಮೊಬೈಲ್ ಸಂಖ್ಯೆಗಳು: 94498 60466, 9740430061, 6361019245, 9844013948, 8746803006, 9880196581
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















