ಚಿತ್ರದುರ್ಗ, ಸುದ್ದಿಒನ್, (ಸೆ.14) : ಚಿತ್ರದುರ್ಗ ಜಿಲ್ಲೆಯಲ್ಲಿ ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸುಳ್ಳು ಸುದ್ದಿ, ಇದಕ್ಕೆ ಕಿವಿ ಕೊಡ ಬೇಡಿ ಎಂದು ಎಸ್‌ಪಿ ಪರುಶುರಾಮ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಹೊರ ರಾಜ್ಯಗಳಿಂದ ಬಂದಂತಹ ಕೆಲವು ಮಕ್ಕಳ ಕಳ್ಳರು ಜಿಲ್ಲೆಯಲ್ಲಿ ಮಕ್ಕಳನ್ನು ಅಪಹರಿಸಿ, ಅವರ ಅಂಗಾಂಗಗಳನ್ನು ತೆಗೆದುಕೊಂಡು ಹೋಗುವ ಬಗ್ಗೆ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಮಕ್ಕಳನ್ನು ಅಪರಹಣ ಮಾಡಿರುವ ಬಗ್ಗೆ ಯಾವುದೇ ಪ್ರಕರಣ ಘಟನೆಗಳು ವರದಿಯಾಗಿರುವುದಿಲ್ಲ. ಅಂತಹ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಯ ತುರ್ತು ಕರೆ ಸಂಖ್ಯೆ 112 ಅಥವಾ ಹತ್ತಿರದ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಿ.
ಸುಳ್ಳು ಮತ್ತು ತಪ್ಪು ಮಾಹಿತಿ ಆಧಾರದ ಮೇಲೆ ಅಮಾಯಕರ ಮೇಲೆ ಹಲ್ಲೆ/ದೌರ್ಜನ್ಯ ನಡೆಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ಪರುಶುರಾಮ ಕೆ. ಅವರು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.