ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 26 : ಕಲೆ, ಸಾಹಿತ್ಯ, ಜಾನಪದವನ್ನು ಗ್ರಾಮೀಣ ಪ್ರದೇಶಗಳಲ್ಲಿ ಉಳಿಸಿ ಬೆಳೆಸಬೇಕಾಗಿದೆ ಎಂದು ಹಿರಿಯೂರು ತಾಲ್ಲೂಕಿನ ಗಿರಿಯಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಪ್ಪ ತಿಳಿಸಿದರು.
ಬಹುಮುಖಿ ಕಲಾ ಕೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದೊಂದಿಗೆ ಯಲ್ಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಲ್ಮೀಕಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಾ ಸನ್ಮಾನ ಹಾಗೂ ಗೀತ ಗಾಯನ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಮೊಬೈಲ್ ಟಿವಿ. ಹಾವಳಿಗಳ ನಡುವೆ ಗ್ರಾಮೀಣ ಕಲೆಗಳು ನಶಿಸಿ ಹೋಗುತ್ತಿರುವುದರಿಂದ ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ ಎಂದು ಕರೆ ನೀಡಿದರು.
ಶಿವಭಕ್ತಿಗೀತೆಗಳು, ಶನಿದೇವರ ಭಕ್ತಿಗೀತೆಗಳು, ಶಿವತಾಂಡ ಸ್ತೋತ್ರ, ಲಿಂಗಾಷ್ಟಕ ಹಾಗೂ ಕನ್ನಡ ಭಕ್ತಿಗೀತೆಗಳನ್ನು ಹಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶನೈಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಮಣ್ಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಕಸಪ್ಪನಹಳ್ಳಿಯ ಕಲಾವಿದ ನಾಗಭೂಷಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಓ.ರಮೇಶ, ಗಿರಿಯಪುರ ಗ್ರಾಮ ಪಂಚಾಯಿತಿ ಸದಸ್ಯೆ ಮಂಜಮ್ಮ, ಬಹುಮುಖಿ ಕಲಾ ಕೇಂದ್ರದ ಕಾರ್ಯದರ್ಶಿ ಟಿ.ಮಧು ಇವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.



