ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು : ಪ್ರಯಾಣದ ವೆಚ್ಚ ಕೊಡ್ತೀವಿ ಕರೆ ತನ್ನಿ ಎಂದು ಮನವಿ ಮಾಡಿದ ಸ್ಟಾಲಿನ್

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಈ ಮಧ್ಯೆ ಶಿಕ್ಷಣಕ್ಕಾಗಿ ಉಕ್ರೇನ್ ಗೆ ತೆರಳಿದ ಭಾರತೀಯ ವಿದ್ಯಾರ್ಥಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ನಡೆಯುತ್ತಿರುವ ಬೆಳವಣಿಗೆ ಇಲ್ಲಿ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿರುವ ತಮಿಳುನಾಡಿನ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆ ತನ್ನಿ. ಅದಕ್ಕೆ ಖರ್ಚಾಗುವ ಸಂಪೂರ್ಣ ಪ್ರಯಾಣದ ವೆಚ್ಚವನ್ನ ನಾವೇ ಭರಿಸುತ್ತೇವೆ. ಒಂದೇ ಭಾರತ್ ಮಿಷನ್ ನಂತೆ ವಿಶೇಷ ವಿಮಾನಗಳ ಮೂಲಕ ವಿದ್ಯಾರ್ಥಿಗಳನ್ನ ಕರೆ ತನ್ನು ಎಂದು ಸಿಎಂ ಸ್ಟಾಲಿನ್ ವಿದೇಶಾಂಗ ಸಚಿವ ಜಯಶಂಕರ್ ಅವರಿಗೆ ಮನವಿ ಪತ್ರದ ಮೂಲಕ ತಿಳಿಸಿದ್ದಾರೆ.

ಉಕ್ರೇನ್ ನಲ್ಲಿ ವ್ಯಾಸಂಗ ಮಾಡಲೆಂದು ಹೋದವರಲ್ಲಿ ತಮಿಳುನಾಡಿನ ಐದು ಸಾವಿರ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದ್ಯ ಯುದ್ಧದ ಪರಿಣಾಮದಿಂದ ವಿಮಾನ ಹಾರಾಟವೂ ಸ್ಥಗಿತಗೊಂಡಿದೆ. ಭಾರತ ಸರ್ಕಾರವೂ ಕಾರ್ಯಾಚರಣೆಯನ್ನು ನಿಲ್ಲಿಸಿದೆ.

Share This Article
Leave a Comment

Leave a Reply

Your email address will not be published. Required fields are marked *