ಸುದ್ದಿಒನ್, ಚಿತ್ರದುರ್ಗ, ಮಾ. 20 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮಾ. 20ರ ಶುಕ್ತವಾರ ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸಮುದಾಯ ದಂತ ಚಿಕಿತ್ಸಾ ವಿಭಾಗದ ರೂ. 40 ಲಕ್ಷಗಳ ವೆಚ್ಚದ ಹೊಸ ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನವನ್ನು ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಎಸ್.ಎನ್. ಚಂದ್ರಶೇಖರ್, ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ, ದಂತ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ|| ರಘುನಾಥರೆಡ್ಡಿ, ಉಪಪ್ರಾಚಾರ್ಯರಾದ ಡಾ. ಹರಿಣಿ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.









