ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಇಲ್ಲಿನ ಪ್ರತಿಷ್ಠಿತ ಎಸ್.ಜೆ.ಎಂ ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ 27/6/2026 ರಂದು ‘ಲೆಕ್ಸ್ ಯೂನಿಯನ್’ನ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸುಮನಾ ಎಸ್. ಅಂಗಡಿ ಅವರು ಉದ್ಘಾಟಿಸಿದರು. ಇದೇ ವೇಳೆ ಅವರು ಕಾರ್ಯಕ್ರಮದ ಅಂಗವಾಗಿ ಸಿದ್ಧಪಡಿಸಲಾಗಿದ್ದ ಸುಂದರವಾದ ಫ್ಲೆಕ್ಸ್ ಅನ್ನು ಅನಾವರಣಗೊಳಿಸುವ ಮೂಲಕ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಗೌರವಾನ್ವಿತ ಪ್ರಾಂಶುಪಾಲರಾದ ಡಾ. ದಿನೇಶ್ ಎಸ್. ಅವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಇಂತಹ ಸಂಘ-ಸಂಸ್ಥೆಗಳ ಚಟುವಟಿಕೆಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಮಾರಂಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಹಾಗೆಯೇ ಲೆಕ್ಸ್ ಯೂನಿಯನ್ನ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಾವಿದ್ಯಾಲಯದ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.











