ಸುದ್ದಿಒನ್, ಚಿತ್ರದುರ್ಗ, ಡಿ. 15 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡದ ಪ್ರೊ. ಕಾಳಗೌಡ ಬಸಪ್ಪ ಗುಡಸಿ ಅವರಿಂದು ಅಧಿಕಾರ ವಹಿಸಿಕೊಂಡರು.
ಗುಡಸಿ ಅವರಿಗೆ ಈ ಹಿಂದೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಾಗು ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಈ ಸಂದರ್ಭದಲ್ಲಿ ಎಸ್.ಜೆ.ಎಂ. ಸಂಸ್ಥೆಯ ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಶ್ರೀಮಠ ಹಾಗು ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ.ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಅವರುಗಳು ನೂತನ ಕುಲಪತಿಗಳನ್ನು ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









