Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಎಸ್.ಜೆ.ಎಂ. ವಿದ್ಯಾಪೀಠದ ಸಿಇಒ ಎಂ. ಭರತ್‍ಕುಮಾರ್ ಅವರನ್ನು ಬಿಡುಗಡೆಗೊಳಿಸಿ ಆದೇಶಿದ ಡಾ. ಶಿವಮೂರ್ತಿ ಮುರುಘಾ ಶರಣರು

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್ 08 :  ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು ಎಸ್.ಜೆ.ಎಂ. ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕರ್ತವ್ಯಗಳಿಂದ ದಿ. 8-12-23ರಿಂದ ತಕ್ಷಣ ಜಾರಿಗೆ ಬರುವಂತೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ ಎಂದು ಶ್ರೀಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದೇ ಡಿಸೆಂಬರ್ 5 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು  ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು
ಬಿಡುಗಡೆಗೊಳಿಸಿದ್ದಾರೆ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂ. ಭರತ್‍ಕುಮಾರ್ ಅವರು ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ ವರ್ಷ ಡಿಸೆಂಬರ್ 5 ರಂದು ಅಧಿಕಾರ ಸ್ವೀಕರಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...