ಎಸ್.ಕೆ. ಬಸವರಾಜನ್ ಪ್ರಕರಣ ರದ್ದು : ಹೈಕೋರ್ಟ್ ಮಹತ್ವದ ತೀರ್ಪು

1 Min Read

ಸುದ್ದಿಒನ್, ಚಿತ್ರದುರ್ಗ, ನವಂಬರ್.03 :  ಎಸ್ ಕೆ ಬಸವರಾಜನ್ ದಂಪತಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈ ಪ್ರಕರಣವನ್ನು ರದ್ದು ಮಾಡಿದೆ.

ಎಸ್ ಕೆ ಬಸವರಾಜ್ ಅವರ ಮೊಬೈಲ್ ಆಡಿಯೋ ಆಧರಿಸಿ ಎಫ್ಐಆರ್ ದಾಖಲಾಗಿತ್ತು. ಆ ಪ್ರಕರಣ ರದ್ದು ಕೋರಿ ಬಸವರಾಜನ್ ದಂಪತಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.

ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ದೂರು ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಆಡಿಯೋಗೆ ಸಂಬಂಧಿಸಿದಂತೆ ಬಸವರಾಜನ್ ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿತ್ತು. ಇದೀಗ ಆ ಪ್ರಕರಣ ಸಂಬಂಧ ಅರ್ಜಿ ಸಲ್ಲಿಸಿದ್ದ ಬಸವರಾಜನ್ ಅವರಿಗೆ ಜಯ ಸಿಕ್ಕಿದೆ.

Share This Article
Leave a Comment

Leave a Reply

Your email address will not be published. Required fields are marked *