Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್. ಆರ್. ಎಸ್. – ಆಸ್ಕರ್ ಫೆರ್ನಾಂಡಿಸ್ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ನೆರವೇರಿದ ದುರ್ಗಾತರಂಗ ವಾರ್ಷಿಕೋತ್ಸವ ಸಮಾರಂಭ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ :  ನಗರದ ಪ್ರತಿಷ್ಠಿತ ಎಸ್. ಆರ್. ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ನಡೆಯುತ್ತಿರುವ ಆಸ್ಕರ್ ಫೆರ್ನಾಂಡಿಸ್ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಸಂಜೆ ದುರ್ಗಾತರಂಗ-ಕಲೆಗಳ ಕಾರಂಜಿ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಮಾಜಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಆಸ್ಕರ್ ಫೆರ್ನಾಂಡಿಸ್ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಸಂಸ್ಥಾಪಕರಾದ ಹೆಚ್. ಆಂಜನೇಯ ರವರು ಭಾಗವಹಿಸಿದ್ದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಡಾ. ಹೆಚ್. ವಿಶ್ವನಾಥರವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಪೋಷಕರು ಶಾಲೆಯೊಂದಿಗೆ ಯಾವ ರೀತಿ ಭಾಂಧವ್ಯವನ್ನು ಹೊಂದಿದಾಗ ವಿದ್ಯಾರ್ಥಿಗಳ ಪ್ರಗತಿ ಕಾಣಬಹುದಾಗಿದೆ ಎಂಬುವುದನ್ನು ಬಸವಣ್ಣನವರ ವಚನಗಳ ಮೂಲಕ ಮನವರಿಕೆ ಮಾಡಿಕೊಟ್ಟರು.

ಸಮಾರಂಭದ ಅಧಕ್ಷತೆವಹಿಸಿ ಮಾತಾಡಿದ ಎಸ್. ಆರ್. ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಿ. ಎ. ಲಿಂಗಾರೆಡ್ಡಿರವರು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶಾಲೆಯ ನಿಯಮಗಳನ್ನು ಪರಿಪಾಲಿಸಲು ತಿಳಿಸಿದರಲ್ಲದೇ, ಸಂಸ್ಥೆಯು ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಸತತವಾಗಿ ಪ್ರಯತ್ನಿಸುತ್ತಿರುವುದನ್ನು ಹಾಗೂ ಅದರಲ್ಲಿ ಯಶಸ್ಸು ಗಳಿಸಿರುವುದನ್ನು ಪೋಷಕರ ಗಮನಕ್ಕೆ ತಂದರು.

ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲೆಯ ನಿಯಮಾವಳಿಗಳನ್ನು ಪರಿಪಾಲಿಸಿದಲ್ಲಿ ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಅವಕಾಶಗಳನ್ನು ಸಂಸ್ಥೆಯ ಮೂಲಕ ಒದಗಿಸುವುದಾಗಿ ತಿಳಿಸಿದರು.

ಈ ವಾರ್ಷಿಕೋತ್ಸವದ ಸಮಾರಂಭದಲ್ಲಿ ಎಸ್. ಆರ್. ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಪಿ ಲಿಂಗಾರೆಡ್ಡಿ ರವರು, ಉಪಾಧ್ಯಕ್ಷರಾದ  ಬಿ. ಎಲ್. ಅಮೋಘರವರು ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಟಿ. ಎಸ್. ರವಿರವರು ಉಪಸ್ಥಿತರಿದ್ದರು.

ಶಾಲೆಯ ಆಡಳಿತಧಿಕಾರಿಯಾದ ಡಾ. ಚಿನ್ಮಯ. ಸಿ. ಸಾಲಿಮಠ, ಮುಖ್ಯಶಿಕ್ಷಕಿ ಶ್ರೀಮತಿ ಕೆ. ಜೆ. ಪದ್ಮಾವತಿ ಹಾಗೂ ಸಮಸ್ತ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!