ಚಿತ್ರದುರ್ಗ. ಸೆ.01: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿ ಎಸ್.ರಮ್ಯ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ವೆಂಕಟೇಶ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಎಸ್.ರಮ್ಯ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.
ಎಸ್.ರಮ್ಯ ಅವರು ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೊಮ್ಮೇನಹಳ್ಳಿ ವಲಯ ಆಯುಕ್ತೆಯಾಗಿ ಹಾಗೂ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.










